ನವದೆಹಲಿ: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿ ಸಂವಿಧಾನ ಪೀಠವು ರೂಪಿಸಿರುವ ಮಾನದಂಡವನ್ನು ಕಡಿತಗೊಳಿಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಎಂ.ನಾಗರಾಜ್ (2006) ಮತ್ತು ಜರ್ನೈಲ್ ಸಿಂಗ್ (2018) ಪ್ರಕರಣಗಳಲ್ಲಿ ಈ ಹಿಂದೆ ರೂಪಿಸಿರುವ ಮಾನದಂಡಗಳಲ್ಲಿ ಕಡಿತಗೊಳಿಸುವುದು ಸಾಧ್ಯವಿಲ್ಲ. ಹಾಗೇ ಹೊಸ ಮಾನದಂಡಗಳನ್ನು ರೂಪಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್, ಸಂಜೀವ್ ಖನ್ನಾ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.

ಸ್ಥಾನಗಳಿಗೆ ಪ್ರಾತಿನಿಧ್ಯದ ಅಭಾವದ ಕುರಿತು ನಿರ್ಧರಿಸಲು ಅಗತ್ಯವಾದ ಮಾಹಿತಿಯನ್ನು ಸಂಗ್ರಹಿಸುವುದು ಕಡ್ಡಾಯವಾಗಿದೆ. ಕಾಲಕಾಲಕ್ಕೆ ಪರಿಶೀಲನೆಗೆ ಒಳಪಡಿಸುವುದಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಅವಧಿಯನ್ನು ಕೇಂದ್ರ ಸರ್ಕಾರವು ಗೊತ್ತು ಪಡಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ.

'ಮೀಸಲಾತಿ ಆಧಾರದಲ್ಲಿ ಬಡ್ತಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ' ಕರ್ನಾಟಕ ಸರ್ಕಾರದ ನೂತನ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಕುರಿತ ತೀರ್ಪನ್ನು ಸಹ ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.