ಪ್ರಮಾಣೀಕೃತ ತಯಾರಕರಿಗೆ ಅವಕಾಶ
ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (ಎನ್‌ಇಇಆರ್‌ಐ) ಮತ್ತು ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆಯಿಂದ (ಪಿಇಎಸ್‌ಒ) ಹಸಿರು ಪಟಾಕಿ ತಯಾರಿಕೆಗೆ ಪ್ರಮಾಣಪತ್ರ ಪಡೆದಿರುವ ತಯಾರಕರಿಗೆ ಮುಂದಿನ ಆದೇಶದವರೆಗೆ ಪಟಾಕಿ ತಯಾರಿಕೆಗೆ ಅನುಮತಿ ನೀಡುತ್ತೇವೆ. ಆದರೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಈ ಪಟಾಕಿಗಳನ್ನು ಮಾರಾಟ ಮಾಡಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು ಹೇಳಿದೆ.