ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ 10 ತಾಸಿನಲ್ಲಿ NDRFನಿಂದ ರಕ್ಷಣೆ

Published 7 ಫೆಬ್ರುವರಿ 2024, 3:38 IST
Last Updated 7 ಫೆಬ್ರುವರಿ 2024, 3:38 IST
ಅಕ್ಷರ ಗಾತ್ರ

ಜಾಮ್‌ನಗರ(ಗುಜರಾತ್‌): ಜಾಮ್‌ನಗರ ಜಿಲ್ಲೆಯ ಗೋವಾನಾ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನನ್ನು ರಕ್ಷಿಸಲಾಗಿದೆ.

ಮಂಗಳವಾರ ಸಂಜೆ 6.30ರ ವೇಳೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಬುಧವಾರ ಮುಂಜಾನೆ 4 ಗಂಟೆಯ ವೇಳೆಗೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕನನ್ನು ರಕ್ಷಿಸಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು ಜಿಲ್ಲೆಯ ದ್ವಾರಕ ನಗರದಲ್ಲಿ ಇಂತಹದ್ದೆ ಘಟನೆ ನಡೆದಿದ್ದು, ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT