ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವ ನಿರ್ಣಯ ಗುಜರಾತ್ ವಿಧಾನಸಭೆಯಲ್ಲಿ ಅಂಗೀಕಾರ

Published 7 ಫೆಬ್ರುವರಿ 2024, 15:53 IST
Last Updated 7 ಫೆಬ್ರುವರಿ 2024, 15:53 IST
ಅಕ್ಷರ ಗಾತ್ರ

ಗಾಂಧಿನಗರ: ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರವನ್ನು ಯಶಸ್ವಿಯಾಗಿ ಜಾರಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುವ ನಿರ್ಣಯವನ್ನು ಗುಜರಾತ್ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಈ ನಿರ್ಣಯವನ್ನು ಆಮ್ ಆದ್ಮಿ ಪಕ್ಷವು ಸ್ವಾಗತಿಸಿದ್ದು, ಬೆಂಬಲ ಸೂಚಿಸಿದೆ. ಆರಂಭದಲ್ಲಿ ನಿರ್ಣಯದ ವಿರುದ್ಧ ಧ್ವನಿಯೆತ್ತಿದ್ದ ಕಾಂಗ್ರೆಸ್, ಬಳಿಕ ಮತದಾನದ ವೇಳೆ ನಿರ್ಣಯದ ಪರ ನಿಂತಿತು. ಈ ಮೂಲಕ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.

ಶ್ರೀಮದ್ ಭಗವದ್ಗೀತೆಯಲ್ಲಿ ಅಡಕವಾಗಿರುವ ಮೌಲ್ಯಗಳು ಮತ್ತು ತತ್ವಗಳನ್ನು 6ರಿಂದ 12ನೇ ತರಗತಿವರೆಗೆ ಶಾಲೆಗಳಲ್ಲಿ ಬೋಧಿಸಲಾಗುವುದು ಎಂದು ಕಳೆದ ವರ್ಷ ಡಿಸೆಂಬರ್‌ನಲ್ಲಿ ಗುಜರಾತ್‌ನ ಶಿಕ್ಷಣ ಇಲಾಖೆ ಹೇಳಿತ್ತು.

ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾ ಇಂದು ನಿರ್ಣಯ ಮಂಡಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿ 2020 ವಿದ್ಯಾರ್ಥಿಗಳಲ್ಲಿ ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿ ಮತ್ತು ಜ್ಞಾನ ವ್ಯವಸ್ಥೆಗಳು ಮತ್ತು ಸಂಪ್ರದಾಯಗಳಿಗೆ ಹೆಮ್ಮೆಯ ಭಾವನೆ ಹಾಗೂ ಸಂಪರ್ಕವನ್ನು ಬೆಳೆಸಲು ಒತ್ತು ನೀಡುತ್ತದೆ. ಅದಕ್ಕೆ ಅನುಗುಣವಾಗಿ, ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳ ದೈನಂದಿನ ಜೀವನದಲ್ಲಿ ಸಂಯೋಜಿಸುವುದು ಅತ್ಯಗತ್ಯ, ಇದರಿಂದ ಅವರು ಭಾರತೀಯ ಸಂಸ್ಕೃತಿಯ ಶ್ರೀಮಂತ ಪರಂಪರೆಗೆ ತೆರೆದುಕೊಳ್ಳುತ್ತಾರೆ ಮತ್ತು ಭಾರತೀಯರಾಗಿರುವುದಕ್ಕೆ ಹೆಮ್ಮೆಪಡುತ್ತಾರೆ. ಇದಕ್ಕಾಗಿ, ಶ್ರೀಮದ್ ಭಗವದ್ಗೀತೆಯಲ್ಲಿ ಅಡಕವಾಗಿರುವ ಮೌಲ್ಯಗಳು ಮತ್ತು ತತ್ವಗಳನ್ನು ಶಾಲೆಗಳಲ್ಲಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಪನ್ಶೇರಿಯಾ ಅವರು ತಮ್ಮ ಭಾಷಣದಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT