ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೊರ್ಬಿ ಸೇತುವೆ ಕುಸಿತ: ಪಿಂಚಣಿ ನೀಡಲು ಗುಜರಾತ್ ಹೈಕೋರ್ಟ್ ಸೂಚನೆ

Published 9 ಡಿಸೆಂಬರ್ 2023, 15:36 IST
Last Updated 9 ಡಿಸೆಂಬರ್ 2023, 15:36 IST
ಅಕ್ಷರ ಗಾತ್ರ

ಅಹಮದಾಬಾದ್‌: ಮೊರ್ಬಿಯ ತೂಗು ಸೇತುವೆ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಒಂದು ಬಾರಿ ಪರಿಹಾರ ನೀಡಿದರೆ ಸಾಲದು, ದುರಂತದಲ್ಲಿ ಪುತ್ರರನ್ನು ಕಳೆದುಕೊಂಡ ವೃದ್ಧರಿಗೆ ಜೀವನಪೂರ್ತಿ ಪಿಂಚಣಿ ನೀಡಬೇಕು ಮತ್ತು ವಿಧವೆಯರಿಗೆ ನೌಕರಿ ಅಥವಾ ಸ್ಟೈಪೆಂಡ್‌ ನೀಡಬೇ‌ಕು ಎಂದು ಗುಜರಾತ್‌ ಹೈಕೋರ್ಟ್‌ ಸೂಚಿಸಿದೆ.

ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸುನಿತಾ ಅಗರ್ವಾಲ್‌ ಮತ್ತು ನ್ಯಾಯಮೂರ್ತಿ ಅನಿರುದ್ಧ ಮಾಯಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಸೇತುವೆಯ ನಿರ್ವಹಣೆ ಜವಾಬ್ದಾರಿ ಹೊಂದಿದ್ದ ಒರೆವಾ ಕಂಪನಿಗೆ ಈ ಸೂಚನೆ ನೀಡಿದೆ.

ದುರಂತದಿಂದಾಗಿ ಅನಾಥರಾದ ಮಕ್ಕಳಿಗೆ ಮತ್ತು ವಿಧವೆಯರಿಗೆ ನೆರವು ನೀಡುತ್ತಿದ್ದೇವೆ ಎಂದು ಕಂಪನಿಯು ನ್ಯಾಯಾಲಯಕ್ಕೆ ತಿಳಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು, ಪುತ್ರರನ್ನು ಕಳೆದುಕೊಂಡಿರುವ ವೃದ್ಧರಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದೆ. ಅವರಿಗೆ ಪಿಂಚಣಿ ನೀಡುವಂತೆಯೂ ಸೂಚಿಸಿದೆ.

ದುರಂತದಲ್ಲಿ ಮೃತಪಟ್ಟವರ ಸಂಬಂಧಿಕರ ಸ್ಥಿತಿಗತಿಗಳ ಕುರಿತು ವರದಿ ಸಲ್ಲಿಸುವಂತೆ ಹೈಕೋರ್ಟ್‌, ಮೋರ್ಬಿ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.

2022ರ ಅಕ್ಟೋಬರ್‌ 30ರಂದು ತೂಗುಸೇತುವೆ ಕುಸಿದು 135 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT