ಮುಂಬೈ: ಕರ್ನಾಟಕ ಚುನಾವಣೆಗಾಗಿ ಬಿಜೆಪಿ, ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡುತ್ತಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ, ತಮ್ಮ ಪಕ್ಷದ ಮುಖವಾಣಿ ‘ಸಾಮ್ನಾ‘ ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿರುವ ಅವರು, ‘ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳನ್ನೆಲ್ಲಾ ಕಸಿದು ಗುಜರಾತ್ಗೆ ಕೊಟ್ಟಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದ ವೇಳೆಯಲ್ಲಿ ಗುಜರಾತ್ನ ಸ್ಥಿತಿಗತಿ ಹಾಗೂ ಮೊರ್ಬಿ ಸೇತುವೆ ದುರಂತದ ಹೊರತಾಗಿಯೂ ಈ ಫಲಿತಾಂಶ ಬಂದಿರುವುದು ಅಚ್ಚರಿಯೇನಲ್ಲ ಎಂದು ಅವರು ಹೇಳಿದ್ದಾರೆ.

‘ಹಲವು ಜಾಗತಿಕ ಸಮಾವೇಶಗಳು ಗುಜರಾತ್ನಲ್ಲಿ ನಡೆದವು. ಜಾಗತಿಕ ನಾಯಕರು ಸಬರಮತಿ ಆಶ್ರಮಕ್ಕೆ ಭೇಟಿ ನೀಡುತ್ತಾರೆ. ಪ್ರಧಾನಿ ಮೋದಿಯವರಿಂದಾಗಿ ಇವೆಲ್ಲಾ ಆಗಿದೆ. ಹಲವು ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಮಹಾರಾಷ್ಟ್ರದಿಂದ ಕಸಿದು ಗುಜರಾತ್ಗೆ ತೆಗೆದುಕೊಂಡು ಹೋಗಲಾಗಿದೆ. ಸರ್ದಾರ್ ಪಟೇಲರ ಮೂರ್ತಿ, ಪ್ರಧಾನಿ ಮೋದಿಯವರ ಗುಜರಾತ್ ಅಸ್ಮಿತೆ, ಇವೆಲ್ಲಾ ಕಾರಣಗಳಿಂದ ಗುಜರಾತ್ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ‘ ಎಂದಿದ್ದಾರೆ.

‘ಮಹಾರಾಷ್ಟ್ರ ಅಭಿವೃದ್ಧಿ ಯೋಜನೆಗಳು ಗುಜರಾತ್ಗೆ ಹೋಗಿದ್ದು ಕೂಡ ಬಿಜೆಪಿ ಗೆಲುವಿನಲ್ಲಿ ಪಾತ್ರ ವಹಿಸಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಯೋಜನೆಗಳನ್ನು ಗುಜರಾತ್ಗೆ ಮಾರಾಟ ಮಾಡಿದರು. ಈಗ ಕರ್ನಾಟಕ ಚುನಾವಣೆ ಗೆಲ್ಲಲು ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡಲಾಗುತ್ತಿದೆ‘ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.