ಮುಂಬೈ: ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶವು ನಿರೀಕ್ಷಿತವಾಗಿದ್ದು, ರಾಷ್ಟ್ರದ ಮನಸ್ಥಿತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಗುರುವಾರ ಹೇಳಿದ್ದಾರೆ.

ಗುಜರಾತ್‌ನಲ್ಲಿ ದಾಖಲೆ ಗೆಲುವಿನೊಂದಿಗೆ ಸತತ ಏಳನೇ ಅವಧಿಗೆ ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವೆನಿಸಿದೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ 182 ಸದಸ್ಯ ಬಲದ ಗುಜರಾತ್‌ನಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, 136ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕಾಂಗ್ರೆಸ್ 16 ಹಾಗೂ ಆಮ್ ಆದ್ಮಿ ಪಕ್ಷವು 5 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ನಿರೀಕ್ಷಿತವಾಗಿದೆ. ಇದಕ್ಕಾಗಿ ಇಡೀ ಆಡಳಿತ ಯಂತ್ರವನ್ನು ಉಪಯೋಗಿಸಲಾಗಿದೆ. ಅನೇಕ ಯೋಜನೆಗಳನ್ನು ರಾಜ್ಯದ ಪರ ಘೋಷಿಸಲಾಗಿದೆ ಎಂದು ಶರದ್ ಪವಾರ್ ಹೇಳಿದರು.

ಗುಜರಾತ್ ಫಲಿತಾಂಶ ದೇಶದ ಮನಸ್ಥಿತಿಯನ್ನು ಪ್ರತಿಬಿಂಬಿಸುವುದಿಲ್ಲ. ಬಿಜೆಪಿಯನ್ನು ಸೋಲಿಸಿರುವ ದೆಹಲಿ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶಗಳೇ ಇದನ್ನು ಸಾಬೀತುಪಡಿಸುತ್ತವೆ ಎಂದು ಹೇಳಿದರು.

ಇದನ್ನೂ ಓದಿ:
LIVE | ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್‌ನಲ್ಲಿ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್ ಮುನ್ನಡೆ
Himachal Pradesh Results Highlights: ಬಿಜೆಪಿ–ಕಾಂಗ್ರೆಸ್ ನಡುವೆ ಪೈಪೋಟಿ
Gujarat Election Results: 7ನೇ ಬಾರಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಸಜ್ಜು
Gujarat Election Results: ಹಾರ್ದಿಕ್ ಪಟೇಲ್ಗೆ ಅಲ್ಪ ಮುನ್ನಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.