ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಎರಡನೇ ಹಂತದ ಮತದಾನದಂದು (ಡಿಸೆಂಬರ್ 5) ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕಿಡಿಕಾರಿದ್ದಾರೆ.

ಅಹಮದಾಬಾದ್‌ನಲ್ಲಿ ಇಂದು (ಸೋಮವಾರ) ಮತದಾನ ಮಾಡಲು ಮತಗಟ್ಟೆಗೆ ನಡೆದು ಸಾಗಿದ ಪ್ರಧಾನಿ ಅವರು, ದಾರಿಯುದ್ದಕ್ಕೂ ನೆರೆದಿದ್ದ ಜನರತ್ತ ಕೈ ಬೀಸುತ್ತಾ ಸಾಗಿದ್ದರು.

ಮತದಾನದ ದಿನದಂದು ಪ್ರಧಾನಿ ಮೋದಿಯವರು ಬೆಂಬಲಿಗರತ್ತ ಕೈ ಬೀಸುತ್ತಾ ಸಾಗಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ವರ್ಷ ಭಾರತದಲ್ಲಿ ನಡೆಯುವ ಜಿ20 ಶೃಂಗಸಭೆಯ ಲಾಂಛನದಲ್ಲಿಯೂ (ಲೋಗೊದಲ್ಲಿಯೂ) ಬಿಜೆಪಿ ಪಕ್ಷದ ಚಿಹ್ನೆಯಾದ 'ಕಮಲ'ವನ್ನು ಸೇರಿಸಲಾಗಿದೆ ಎಂದೂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿದೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮೊದಲ ಹಂತದಲ್ಲಿ19 ಜಿಲ್ಲೆಗಳ 89 ಕ್ಷೇತ್ರಗಳಿಗೆ ಡಿಸೆಂಬರ್ 1ರಂದು ಮತದಾನ ನಡೆದಿದೆ. ಎರಡನೇ ಹಂತದಲ್ಲಿ 14 ಜಿಲ್ಲೆಗಳ 93 ಕ್ಷೇತ್ರಗಳಲ್ಲಿ ಇಂದು (ಡಿ.5) ಮತದಾನ ನಡೆಯುತ್ತಿದೆ.ಡಿಸೆಂಬರ್ 8ರಂದು ಮತ ಎಣಿಕೆ ನಡೆದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ:ಗುಜರಾತ್ ಚುನಾವಣೆ:93 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಬಿರುಸು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.