ವಲ್ಸಾಡ್: ಗುಜರಾತ್ ರಾಜ್ಯದ ವಲ್ಸಾಡ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಫಾರ್ಮಾ ಕಂಪನಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಇಲ್ಲಿನ ಕೈಗಾರಿಕ ವಲಯದಲ್ಲಿ ವ್ಯಾನ್ ಫಾರ್ಮಾ ಕಂಪನಿಗೆ ಸೇರಿದ ಕಾರ್ಖಾನೆಯಲ್ಲಿ ಹಠಾತ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ಸಮಯದಲ್ಲಿ ಕಟ್ಟಡದ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Gujarat: Explosion in Valsad's pharma company; 2 dead, 2 injured