ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ಬಾಯ್ಲರ್‌ ಸ್ಫೋಟದಲ್ಲಿ ನಾಲ್ವರ ಸಾವು

Last Updated 24 ಡಿಸೆಂಬರ್ 2021, 13:52 IST
ಅಕ್ಷರ ಗಾತ್ರ

ವಡೋದರ: ಗುಜರಾತ್‌ನ ವಡೋದರದಲ್ಲಿ ರಾಸಾಯನಿಕ ಕಾರ್ಖಾನೆಯೊಂದರ ಬಾಯ್ಲರ್‌ನಲ್ಲಿ ಪ್ರಬಲ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ರಾಸಾಯನಿಕ ಕಾರ್ಖಾನೆಯಲ್ಲಿ ಬೆಳಿಗ್ಗೆ 9.30ಕ್ಕೆ ಸಂಭವಿಸಿದ ಸ್ಫೋಟದಿಂದಾಗಿ ಭಾರಿ ಸದ್ದು ಕೇಳಿಸಿತು. ಅವಘಡದಲ್ಲಿ 15 ಮಂದಿ ಗಾಯಗೊಂಡರು. ಈ ಪೈಕಿ ನಾಲ್ವರು ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟರು. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ಧಾವಿಸಿದ್ದು ಸ್ಫೋಟಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT