ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಧಾನಿ ಪದವಿ ಪ್ರಮಾಣಪತ್ರ: ಕೇಜ್ರಿವಾಲ್‌ ಮೇಲ್ಮನವಿ ವಜಾ

Published : 9 ನವೆಂಬರ್ 2023, 14:36 IST
Last Updated : 9 ನವೆಂಬರ್ 2023, 14:36 IST
ಫಾಲೋ ಮಾಡಿ
Comments

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರ ನೀಡುವಂತೆ ನಿರ್ದೇಶನ ನೀಡಿದ್ದ ಮುಖ್ಯ ಮಾಹಿತಿ ಆಯುಕ್ತರ (ಸಿಐಸಿ) ನಿರ್ದೇಶನವನ್ನು ರದ್ದುಗೊಳಿಸಿ ಹಾಗೂ ತಮಗೆ ₹ 25 ಸಾವಿರ ದಂಡ ವಿಧಿಸಿ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್‌ ಹೈಕೋರ್ಟ್‌ ಗುರುವಾರ ವಜಾಗೊಳಿಸಿತು.

ನ್ಯಾಯಮೂರ್ತಿ ಬಿರೇನ್‌ ವೈಷ್ಣವ್‌ ಅವರಿದ್ದ ನ್ಯಾಯಪೀಠವು ಕೇಜ್ರಿವಾಲ್‌ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಪ್ರಧಾನಿ ಮೋದಿ ಅವರ ಪದವಿ ಕುರಿತ ಮಾಹಿತಿಯನ್ನು ಕೇಜ್ರಿವಾಲ್‌ ಅವರಿಗೆ ನೀಡುವಂತೆ ಆಗಿನ ಮುಖ್ಯ ಮಾಹಿತಿ ಆಯುಕ್ತ ಎಂ.ಶ್ರೀಧರ ಆಚಾರ್ಯುಲು ಅವರು ಗುಜರಾತ್‌ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದರು. ಸಿಐಸಿ ಅವರ ನಿರ್ದೇಶನ ಪ್ರಶ್ನಿಸಿ ಗುಜರಾತ್‌ ವಿಶ್ವವಿದ್ಯಾಲಯ 2016ರಲ್ಲಿ ಗುಜರಾತ್‌ ಹೈಕೋರ್ಟ್‌ ಮೆಟ್ಟಿಲೇರಿತ್ತು.

‘ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲದ ಹೊರತು, ಆರ್‌ಟಿಐ ಕಾಯ್ದೆಯಡಿ ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ನೀಡಲಾಗಿದೆ’ ಎಂದು ಹೇಳಿದ್ದ ಹೈಕೋರ್ಟ್‌, ಸಿಐಸಿ ಅವರ ನಿರ್ದೇಶನವನ್ನು ರದ್ದುಗೊಳಿಸಿ ಕಳೆದ ಮಾರ್ಚ್‌ 31ರಂದು ಆದೇಶಿಸಿತ್ತು. ಪ್ರಕರಣದ ವೆಚ್ಚವಾಗಿ ಕೇಜ್ರಿವಾಲ್‌ ಅವರಿಗೆ ₹ 25 ಸಾವಿರ ದಂಡ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT