ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷೇತರ ಶಾಸಕ ವಘೇಲಾ ರಾಜೀನಾಮೆ: ಬಿಜೆಪಿಗೆ ವಾಪಸಾಗಲು ನಿರ್ಧಾರ

Published 25 ಜನವರಿ 2024, 12:54 IST
Last Updated 25 ಜನವರಿ 2024, 12:54 IST
ಅಕ್ಷರ ಗಾತ್ರ

ಅಹಮದಾಬಾದ್‌: ವಡೋದರಾ ಜಿಲ್ಲೆಯ ವಾಘೋಡಿಯಾ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಧರ್ಮೇಂದ್ರಸಿಂಹ ವಘೇಲಾ ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿಗೆ ಮರಳುವುದಾಗಿ ಘೋಷಿಸಿದ್ದಾರೆ.

‘ದೇಶದಲ್ಲಿ ರಾಮರಾಜ್ಯ ಸ್ಥಾಪನೆಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕೈ ಬಲಪಡಿಸಲು ಬೆಂಬಲಿಗರೊಂದಿಗೆ ಬಿಜೆಪಿಗೆ ಮರಳುತ್ತಿರುವೆ. ಕ್ಷೇತ್ರದಲ್ಲಿನ ಜನರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ಈ ನಿರ್ಧಾರ ತೆಗೆದುಕೊಂಡಿರುವೆ’ ಎಂದು ರಾಜೀನಾಮೆ ಸಲ್ಲಿಸಿದ ಬಳಿಕ ತಮ್ಮನ್ನು ಭೇಟಿಯಾದ ವರದಿಗಾರರಿಗೆ ತಿಳಿಸಿದರು.

ಎರಡು ತಿಂಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ವಘೇಲಾ ಮೂರನೇಯವರು. ಕಳೆದ ಡಿಸೆಂಬರ್‌ನಲ್ಲಿ ಆಮ್‌ಆದ್ಮಿ ಪಕ್ಷದ ಶಾಸಕ ಭೂಪೇಂದ್ರ ಭಯಾನಿ ರಾಜೀನಾಮೆ ನೀಡಿದ್ದರು. ಈಚೆಗಷ್ಟೇ ವಿಜಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಿ.ಜೆ.ಚಾವಡಾ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT