ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಾಜಿ ಮಹಾರಾಜ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ವ್ಯಕ್ತಿ ಬಂಧನ

Published 9 ಜುಲೈ 2023, 13:19 IST
Last Updated 9 ಜುಲೈ 2023, 13:19 IST
ಅಕ್ಷರ ಗಾತ್ರ

ವಡೋದರ (ಗುಜರಾತ್‌): ಛತ್ರಪತಿ ಶಿವಾಜಿ ಮಹಾರಾಜ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ.

ಆರ್ಯನ್‌ ಪಟೇಲ್‌ ಬಂಧಿತ ಆರೋಪಿ. ಈತ  ಗೆಳೆಯನೊಂದಿಗೆ ವಾದಿಸುತ್ತಿದ್ದ ವೇಳೆ ಶಿವಾಜಿ ಮಹಾರಾಜರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ. ಇದನ್ನು ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

‘ಆರೋಪಿಯು ಕೆಟ್ಟ ಭಾಷೆಯನ್ನು ಬಳಸಿ ಶಿವಾಜಿ ಮಹಾರಾಜರ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾನೆ, ಇದರಿಂದ ಹಿಂದೂಗಳ ಭಾವನೆಗಳಿಗೆ ಘಾಸಿಯುಂಟಾಗಿದೆ’ ಎಂದು ದೂರುದಾರ ದೀಪಕ್‌ ಪಾಲ್ಕರ್‌ ಆರೋಪಿಸಿದ್ದಾರೆ. ವಾಟ್ಸ್‌ಆ್ಯಪ್‌ನಲ್ಲಿ ಬಂದಿದ್ದ ವಿಡಿಯೊವನ್ನು ನೋಡಿ ದೀಪಕ್‌ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT