ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡಿಬಿದ್ದ ರಸ್ತೆಗಳೆಂದು ಬಿಂಬಿಸಲು ಚೀನಾ ವಿಡಿಯೊ ಪೋಸ್ಟ್: ‘ಕೈ’ ಬೆಂಬಲಿಗರ ಬಂಧನ

Published 6 ಆಗಸ್ಟ್ 2024, 10:35 IST
Last Updated 6 ಆಗಸ್ಟ್ 2024, 10:35 IST
ಅಕ್ಷರ ಗಾತ್ರ

ಅಹಮದಾಬಾದ್: ಚೀನಾದ ವಿಡಿಯೊವನ್ನು ಬಳಸಿಕೊಂಡು ಗುಜರಾತ್‌ನಲ್ಲಿ ರಸ್ತೆಗಳು ಗುಂಡಿ ಬಿದ್ದಿವೆ ಎಂದು ಬಿಂಬಿಸಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್‌ನ ರಸ್ತೆಗಳ ಸ್ಥಿತಿಯನ್ನು ಬಿಂಬಿಸಲು ಎಡಿಟ್ ಮಾಡಿದ ವಿಡಿಯೊವನ್ನು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಪ್ರಹ್ಲಾದ್ ದಳವಾಡಿ ಅವರನ್ನು ವಡೋದರಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಾಡಿಯಾಡ್ ಮೂಲದ ಪ್ರಹ್ಲಾದ್ ದಳವಾಡಿ ಅವರು ರಸ್ತೆಯಲ್ಲಿ ಗುಂಡಿ ಬಿದ್ದಿರುವ ಚೀನಾದ ಹಳೆಯ ವಿಡಿಯೊವನ್ನು ಬಳಸಿಕೊಂಡು ಅದಕ್ಕೆ ಸ್ಥಳೀಯ ಹಾಡನ್ನು ಸೇರಿಸಿದ್ದಾನೆ. ಬಳಿಕ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ವಿಡಿಯೊದ ಅಸಲಿಯತ್ತು ಪರಿಶೀಲಿಸಿದಾಗ ಚೀನಾ ಮೂಲದ್ದು ಎಂದು ತಿಳಿದುಬಂದಿದೆ. ಹಾಗಾಗಿ ದಳವಾಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ತಪ್ಪು ಮಾಹಿತಿ ಎಚ್ಚರಿಕೆ! ನಕಲಿ ಜನರು ಗುಜರಾತ್‌ನ ಪ್ರತಿಷ್ಠೆಯನ್ನು ಹಾಳುಮಾಡಲು ಸುಳ್ಳು ವಿಡಿಯೊಗಳನ್ನು ಹರಡುತ್ತಿದ್ದಾರೆ. ರಾಜ್ಯದ ಪ್ರತಿಷ್ಠೆಗೆ ಧಕ್ಕೆ ಉಂಟು ಮಾಡುವ ಉದ್ದೇಶಪೂರ್ವಕ ಪ್ರಯತ್ನಗಳ ವಿರುದ್ಧ ನಾವು ನಿಲ್ಲುತ್ತೇವೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ‘ಎಕ್ಸ್‌’ನಲ್ಲಿ ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT