ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 150 ಕೋಟಿ ಮೌಲ್ಯದ ಮಾದಕ ವಸ್ತುಗಳ ಜಪ್ತಿ

Published 22 ಅಕ್ಟೋಬರ್ 2023, 16:28 IST
Last Updated 22 ಅಕ್ಟೋಬರ್ 2023, 16:28 IST
ಅಕ್ಷರ ಗಾತ್ರ

ಅಹಮದಾಬಾದ್‌: ಅಹಮದಾಬಾದ್‌ನ ಅಪರಾಧ ಪತ್ತೆ ವಿಭಾಗ (ಡಿಸಿಬಿ) ಮತ್ತು ರೆವಿನ್ಯೂ ಗುಪ್ತಚರ ನಿರ್ದೇಶನಾಲಯವು (ಡಿಆರ್‌ಐ) ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ಸುಮಾರು ₹ 150 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ.

‘ಕೆಟಮೈನ್‌ ಮತ್ತು ಕೊಕೇನ್‌ ಅನ್ನು ಬೃಹತ್‌ ಪ್ರಮಾಣದಲ್ಲಿ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ದಾಳಿ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಇದಲ್ಲದೇ, ಮಾದಕ ವಸ್ತು ಉತ್ಪಾದಿಸಲು ಬಳಸಲಾಗುತ್ತಿದ್ದ ₹ 350 ಕೋಟಿ ಮೌಲ್ಯದ ಉಪಕರಣಗಳನ್ನು ಸಹ ಜಪ್ತಿ ಮಾಡಲಾಗಿದೆ’ ಎಂದಿವೆ.

‘ಆರೋಪಿಗಳು ನಿಷೇಧಿತ ಮಾದಕ ವಸ್ತು ಉತ್ಪಾದನೆ ಮಾಡಿ, ಮಹಾರಾಷ್ಟ್ರ, ಗುಜರಾತ್‌, ಮಧ್ಯಪ್ರದೇಶ ಹಾಗೂ ಇತರ ರಾಜ್ಯಗಳಿಗೆ ವಿತರಸುತ್ತಿದ್ದರು’ ಎಂದೂ ವಿವರಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT