ಗಾಂಧಿನಗರ: ವಿವಾಹ ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ಯೋಜಿಸಿರುವುದಾಗಿ ಗುಜರಾತ್ ಸರ್ಕಾರ ಶುಕ್ರವಾರ ಘೋಷಿಸಿದೆ. ಸದ್ಯ ಇರುವ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಈ ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದೆ.

ವಿಧಾನಸಭೆಯಲ್ಲಿ ಮಾತನಾಡಿರುವ ಉಪ ಮುಖ್ಯಮಂತ್ರಿ ಹರ್ಷ್ ಸಂಘವಿ, ಹೊಸ ನಿಯಮಾವಳಿ ರೂಪಿಸುವುದು ಅಗತ್ಯವಾಗಿದೆ ಎಂದು ಒತ್ತಿ ಹೇಳಿದ್ದಾರೆ. ಅಮಾಯಕ ಹೆಣ್ಣು ಮಕ್ಕಳು ಪ್ರೀತಿಯ ಬಲೆಯಲ್ಲಿ ಬೀಳುತ್ತಿದ್ದಾರೆ. ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ವಿವಾಹ ನೋಂದಣಿ ಕಾಯ್ದೆಯ ದುರುಪಯೋಗ ತಪ್ಪಿಸುವ ಸಲುವಾಗಿ, ತಿದ್ದುಪಡಿ ತರಬೇಕು ಎಂದು ಸಾಕಷ್ಟು ಜನರು ಹಾಗೂ ಹಲವು ಸಾಮಾಜಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ ಎಂದು ಹೇಳಿದ್ದಾರೆ.

'ಲವ್ ಜಿಹಾದ್' ಅನ್ನು 'ಸಾಂಸ್ಕೃತಿಕ ಆಕ್ರಮಣ' ಎಂದಿರುವ ಡಿಸಿಎಂ, ಈ ವಿಚಾರವನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸಲು ಸಾಧ್ಯವೇ ಇಲ್ಲ ಎಂದು ಪ್ರತಿಪಾದಿಸಿದ್ದಾರೆ. ವಿವಾಹ ನೋಂದಣಿ ಪ್ರಕ್ರಿಯೆ ವೇಳೆ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಕೆಲವು ಬದಲಾವಣೆಗಳನ್ನು ಮಾಡಲು ಉದ್ದೇಶಿಸಿದ್ದೇವೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಪ್ರಸ್ತಾಪಿತ ತಿದ್ದುಪಡಿಗಳಿಗೆ ಸಾರ್ವಜನಿಕರಿಂದ 30 ದಿನಗಳವರೆಗೆ ಆಕ್ಷೇಪಣೆ, ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.