ಅಹಮದಾಬಾದ್: ಶಾಲೆಗಳು ಪುನರಾರಂಭ ಆಗುವ ತನಕ ವಿದ್ಯಾರ್ಥಿಗಳಿಂದ ಯಾವುದೇ ಶುಲ್ಕ ಸಂಗ್ರಹಿಸಬಾರದು ಎಂದು ಗುಜರಾತ್ ಸರ್ಕಾರ ಆದೇಶಿಸಿದ ಬೆನ್ನಲ್ಲೇ, ಅಲ್ಲಿನ ಖಾಸಗಿ ಶಾಲೆಗಳು ಆನ್ಲೈನ್ ತರಗತಿಗಳನ್ನು ಗುರುವಾರದಿಂದ ಸ್ಥಗಿತಗೊಳಿಸಿವೆ.

ಕಳೆದ ವಾರ ಸರ್ಕಾರ ಹೊರಡಿಸಿದ್ದ ಆದೇಶದಲ್ಲಿ, ಖಾಸಗಿ ಶಾಲೆಗಳು 2020–21ನೇ ಸಾಲಿನ ಶುಲ್ಕವನ್ನು ಏರಿಸುವಂತಿಲ್ಲ ಹಾಗೂ ವಿದ್ಯಾರ್ಥಿಗಳಿಂದ ಶುಲ್ಕವನ್ನು ಸಂಗ್ರಹಿಸುವಂತಿಲ್ಲ ಎಂದು ಹೇಳಿತ್ತು.

ಸರ್ಕಾರದ ಈ ನಡೆಯಿಂದ ಬೇಸರಗೊಂಡಿರುವ ರಾಜ್ಯದ ಸುಮಾರು 15 ಸಾವಿರ ಖಾಸಗಿ ಶಾಲೆಗಳು ಗುರುವಾರದಿಂದ ಆನ್ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿವೆ. ಈ ಕುರಿತು ಬಹುತೇಕ ಶಾಲೆಗಳು, ವಿದ್ಯಾರ್ಥಿಗಳ ಪೋಷಕರಿಗೆ ಬುಧವಾರ ರಾತ್ರಿ ಎಸ್ಎಂಎಸ್ ಮೂಲಕ ಮಾಹಿತಿ ರವಾನಿಸಿವೆ.

‘ಆನ್ಲೈನ್ ತರಗತಿಗಳು ಮಕ್ಕಳಿಗೆ ಸಹಕಾರಿಯಲ್ಲ ಎಂಬುದು ಸರ್ಕಾರದ ಅಭಿಪ್ರಾಯ. ಹಾಗಿದ್ದಲ್ಲಿ ಈ ರೀತಿ ಮಕ್ಕಳಿಗೆ ಬೋಧಿಸುವುದರಲ್ಲಿ ಅರ್ಥವಿಲ್ಲ. ಸರ್ಕಾರ ತನ್ನ ಆದೇಶ ಹಿಂಪಡೆಯುವ ತನಕ ಆನ್ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ’ ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಯ ವಕ್ತಾರ ದೀಪಕ್ ರಾಜ್ಯಗುರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.