ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Article 370: ‘ಸುಪ್ರೀಂ’ ತೀರ್ಪಿನಿಂದ ನಿರಾಸೆಯಾಗಿದೆ– ಗುಲಾಂ ನಬಿ ಆಜಾದ್‌

Published 11 ಡಿಸೆಂಬರ್ 2023, 7:24 IST
Last Updated 11 ಡಿಸೆಂಬರ್ 2023, 7:24 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿರುವುದು ದುಃಖ ಮತ್ತು ದುರದೃಷ್ಟಕರ ವಿಚಾರವಾಗಿದೆ, ಆದರೆ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಡೆಮಾಕ್ರೆಟಿಕ್‌ ಪ್ರೊಗ್ರೆಸ್ಸಿವ್‌ ಆಜಾದ್‌ ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್‌ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಪೀಠವು ನೀಡಿದ ತೀರ್ಪಿನಿಂದ ಆ ಪ್ರದೇಶದ ಜನರಿಗೆ ಸಂತೋಷವಾಗಿಲ್ಲ, ಆದರೂ ತೀರ್ಪನ್ನು ಒಪ್ಪಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಒಮರ್‌ ಅಬ್ದುಲ್ಲಾ ಅವರು, ‘ನಿರಾಶೆಯಾದರೂ ನಿರಾಸೆಯಾಗಲಿಲ್ಲ. ಹೋರಾಟ ಮುಂದುವರಿಯಲಿದೆ. ಇಲ್ಲಿಗೆ ಬರಲು ಬಿಜೆಪಿಗೆ ದಶಕಗಳೇ ಬೇಕಾಯಿತು. ನಾವು ದೀರ್ಘಾವಧಿಗೆ ಸಹ ಸಿದ್ಧರಾಗಿದ್ದೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT