ಶ್ರೀನಗರ: ಏಷ್ಯಾದ ಅತಿ ಎತ್ತರದ ರೋಪ್ವೇಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ, ಗುಲ್ಮಾರ್ಗ್ ಗೊಂಡೋಲಾ ಕೇಬಲ್ ಕಾರಿನ 65 ಕ್ಯಾಬಿನ್ಗಳಲ್ಲಿ 300ಕ್ಕೂ ಹೆಚ್ಚು ಪ್ರವಾಸಿಗರು ಗಂಟೆಗಟ್ಟಲೆ ಸಿಲುಕಿದ ಘಟನೆ ಸೋಮವಾರ ನಡೆದಿದ್ದು, ಎಲ್ಲರನ್ನೂ ರಕ್ಷಿಸಲಾಗಿದೆ.

ಕೆಲ ಪ್ರವಾಸಿಗರು ನೆಲದಿಂದ ಸುಮಾರು 500 ಅಡಿ ಎತ್ತರದಲ್ಲಿ ಕ್ಯಾಬಿನ್ಗಳಲ್ಲಿ ಸಿಲುಕಿಕೊಂಡಿದ್ದರು. ವಿವಿಧ ಏಜೆನ್ಸಿಗಳ ಸಿಬ್ಬಂದಿ ಏಳು ಗಂಟೆ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ರಕ್ಷಿಸಿ, ಸ್ಥಳಾಂತರಿಸಿದರು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಭಾರಿ ಮಳೆಯಿದ್ದ ಕಾರಣ ರಕ್ಷಣಾ ಕಾರ್ಯಾಚರಣೆ ವಿಳಂಬವಾಯಿತು ಎಂದು ಅವರು ವಿವರಿಸಿದ್ದಾರೆ.

ಮಧ್ಯಾಹ್ನದ ವೇಳೆ ತಾಂತ್ರಿಕ ದೋಷ ಕಂಡು ಬಂದ ಕೂಡಲೇ ಕೇಬಲ್ ಕಾರ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ಸಿಬ್ಬಂದಿ ಹಗ್ಗ ಮತ್ತು ಏಣಿಗಳ ಸಹಾಯದಿಂದ ಪ್ರವಾಸಿಗರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-4-526171973

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.