ತಿರುವನಂತಪುರ: ಹಿಂದೂಯೇತರ ಮಹಿಳೆಯೊಬ್ಬರು ಪ್ರವೇಶಿಸಿದ್ದಕ್ಕೆ, ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇಗುಲದ ಕೊಳದಲ್ಲಿ ಮಂಗಳವಾರ ‘ಶುದ್ಧೀಕರಣ’ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಸಾಮಾಜಿಕ ಮಾಧ್ಯಮ ಇನ್ಫ್ಲುಯೆನ್ಸರ್ ಜಾಸ್ಮಿನ್ ಜಾಫರ್ ಅವರು ದೇವಸ್ಥಾನದ ಆವರಣದಲ್ಲಿ ಮಾಡಿದ್ದ ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದರು. ದೇವಾಲಯದ ಕೊಳದಲ್ಲಿ ತಮ್ಮ ಪಾದಗಳನ್ನು ತೊಳೆಯುತ್ತಿರುವ ದೃಶ್ಯ ವಿಡಿಯೊದಲ್ಲಿತ್ತು. ವಿಡಿಯೊಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಪೋಸ್ಟ್ ಅಳಿಸಿ ಹಾಕಿ, ಕ್ಷಮೆಯಾಚಿಸಿದ್ದರು.

ಈ ಬೆಳವಣಿಗೆಯ ಬೆನ್ನಲ್ಲೇ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ‘ಹಿಂದೂಯೇತರ ಮಹಿಳೆಯೊಬ್ಬರು ಕೊಳದ ಆವರಣ ಪ್ರವೇಶಿಸಿ ವಿಡಿಯೊ ಮಾಡಿ ದೇವಸ್ಥಾನದ ಸಂಪ್ರದಾಯಗಳನ್ನು ಮುರಿದಿದ್ದಾರೆ. ಆದ್ದರಿಂದ, ಆಗಸ್ಟ್ 26ರಂದು ಶುದ್ಧೀಕರಣ ವಿಧಿಗಳನ್ನು ನಡೆಸಲಾಗುವುದು. ಅಂದು ಬೆಳಿಗ್ಗೆ 5ರಿಂದ ಮಧ್ಯಾಹ್ನದವರೆಗೆ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ತಿಳಿಸಿದೆ.

ದೇವಾಲಯದ ಆವರಣದಲ್ಲಿ ರೀಲ್ಸ್ ತೆಗೆಯುವುದಕ್ಕೆ ಕೇರಳ ಹೈಕೋರ್ಟ್ ವಿಧಿಸಿದ್ದ ನಿರ್ಬಂಧವನ್ನು ಉಲ್ಲಂಘಿಸಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನದ ಅಧಿಕಾರಿಗಳು ಪೊಲೀಸರಿಗೂ ದೂರು ನೀಡಿದ್ದಾರೆ.

‘ಪೊಲೀಸರು ಸ್ಥಳೀಯ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ವರದಿ ಸಲ್ಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.