ಕೋಲ್ಕತ್ತ: ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿಚಾರದಲ್ಲಿ ರಾಜ್ಯಪಾಲರು ಮಹತ್ವದ ಪಾತ್ರ ವಹಿಸುತ್ತಾರೆ. ಯುಜಿಸಿ ಇತ್ತೀಚೆಗೆ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯಗಳು ಬದ್ಧವಾಗಿರಬೇಕು ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗದ (ಯುಜಿಸಿ) ಮುಖ್ಯಸ್ಥ ಎಂ.ಜಗದೀಶ್ ಕುಮಾರ್ ಅವರು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ರಾಜ್ಯದ 34 ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿಚಾರವಾಗಿ ಟಿಎಂಸಿ ಸರ್ಕಾರ ಮತ್ತು ರಾಜ್ಯಪಾಲ ಸಿ.ವಿ. ಆನಂದ್ ಅವರ ಮಧ್ಯೆ ಭಿನ್ನಾಭಿಪ್ರಾಯಗಳು ತಾರಕಕ್ಕೆ ಏರಿರುವ ಮಧ್ಯೆಯೇ ಕುಮಾರ್ ಅವರು ಈ ಹೇಳಿಕೆ ನೀಡಿದರು.

ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾಲಯಗಳ ಪದನಿಮಿತ್ತ ಕುಲಾಧಿಪತಿಯಾಗಿರುತ್ತಾರೆ.

ಸ್ವಾತಂತ್ರ್ಯ ನಂತರ ಅಥವಾ ಅದಕ್ಕೂ ಮುಂಚಿನಿಂದಲೂ ಕುಲಪತಿಗಳನ್ನು ಆಯ್ಕೆ ಮಾಡುವ ವಿಶೇಷಾಧಿಕಾರವನ್ನು ರಾಜ್ಯಪಾಲರು ಹೊಂದಿದ್ದಾರೆ. ಯುಜಿಸಿಯ ಕರಡು ನಿಯಮಾವಳಿಯಲ್ಲೂ ಈ ವಿಚಾರವಾಗಿ ಹೊಸ ಬದಲಾವಣೆ ಇಲ್ಲ ಎಂದು ಹೇಳಿದರು.

ವಿಶ್ವವಿದ್ಯಾಲಯಗಳನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಉದ್ದೇಶದಿಂದ ಹೊಸ ಕರಡು ನಿಯಮಾವಳಿಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.