ನವದೆಹಲಿ: ಭಾರತೀಯ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಬುಧವಾರ (ಫೆ.19) ಅಧಿಕಾರ ಸ್ವೀಕರಿಸಿದರು.

ನೂತನ ಕಾಯ್ದೆಯಡಿ ನೇಮಕಗೊಂಡಿರುವ ಮೊದಲ ಸಿಇಸಿ ಎನಿಸಿರುವ ಜ್ಞಾನೇಶ್ ಕುಮಾರ್ ಅವರ ಅವಧಿ 2029ರ ಜನವರಿ 26ರವರೆಗೆ ಇರಲಿದೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ‘ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ, 18 ವರ್ಷ ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು. ಮತ ಚಲಾಯಿಸಬೇಕು. ಚುನಾವಣಾ ಆಯೋಗವು ಮತದಾರರೊಂದಿಗೆ ಯಾವಾಗಲೂ ಇರಲಿದೆ’ ಎಂದರು.
.ಜ್ಞಾನೇಶ್ ಕುಮಾರ್ ಹೊಸ ಮುಖ್ಯ ಚುನಾವಣಾ ಆಯುಕ್ತ.
ಇದೇ ವೇಳೆ ವಿವೇಕ್ ಜೋಶಿ ಅವರು ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಹರಿಯಾಣ ಕೇಡರ್ನ ಮಾಜಿ ಐಎಎಸ್ ಅಧಿಕಾರಿಯಾಗಿರುವ ಜೋಶಿ ಅವರು ಸೋಮವಾರ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

ನೂತನ ಕಾಯ್ದೆ: ಕೇಂದ್ರ ಸರ್ಕಾರವು 2023ರ ಡಿಸೆಂಬರ್ನಲ್ಲಿ ‘ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ನಿಬಂಧನೆಗಳು ಹಾಗೂ ಅಧಿಕಾರ) ಕಾಯ್ದೆ–2023’ ಅನ್ನು ರೂಪಿಸಿತ್ತು.

ನೂತನ ಕಾಯ್ದೆ ಪ್ರಕಾರ, ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬದಲಾಗಿ ಕೇಂದ್ರ ಸಚಿವರೊಬ್ಬರು ಸದಸ್ಯರಾಗಿರುತ್ತಾರೆ.
.ನೂತನ ಸಿಇಸಿ ಜ್ಞಾನೇಶ್ ಕುಮಾರ್ ಇಂದು ಪ್ರಮಾಣ.ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ: ಯಾರಿವರು? .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.