ನವದೆಹಲಿ: ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಫೆ. 19ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನೂತನ ಕಾಯ್ದೆಯಡಿ ನೇಮಕಗೊಂಡಿರುವ ಮೊದಲ ಸಿಇಸಿ ಎನಿಸಿರುವ ಜ್ಞಾನೇಶ್ ಕುಮಾರ್ ಅವರ ಅವಧಿ 2029ರ ಜನವರಿ 26ರ ವರೆಗೆ ಇರಲಿದೆ.

ಅವರು 1988ರ ಬ್ಯಾಚ್ನ ಕೇರಳ ಕೇಡರ್ ಐಎಎಸ್ ಅಧಿಕಾರಿಯಾಗಿದ್ದು, ವಿವಿಧ ಇಲಾಖೆಗಳಲ್ಲಿ ಮಹತ್ವದ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಐಐಟಿ–ಕಾನ್ಪುರದಿಂದ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿ ಪಡೆದಿರುವ ಅವರು, ಐಸಿಎಫ್ಎಐನಲ್ಲಿ ಬ್ಯುಸಿನೆಸ್ ಫೈನಾನ್ಸ್, ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಪರಿಸರ ಅರ್ಥಶಾಸ್ತ್ರ ಅಧ್ಯಯನ ಪೂರೈಸಿದ್ದಾರೆ.

ಕೇರಳದಲ್ಲಿ ಉಪವಿಭಾಗಾಧಿಕಾರಿ, ಎಸ್ಸಿ,ಎಸ್ಟಿ ಅಭಿವೃದ್ಧಿ ನಿಗಮ, ಕೊಚ್ಚಿ ಮಹಾನಗರ ಪಾಲಿಕೆ ಹಾಗೂ ಸರ್ಕಾರದ ಕಾರ್ಯದರ್ಶಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಪ್ರಮುಖ ಪಾತ್ರ: ಸಂವಿಧಾನದ 370ನೇ ವಿಧಿಯಡಿ ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡುವುದಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಪ್ರಕ್ರಿಯೆಯಲ್ಲಿ ಜ್ಞಾನೇಶ್ ಕುಮಾರ್ ಮಹತ್ವದ ಪಾತ್ರ ವಹಿಸಿದ್ದಾರೆ. ಆಗ, ಗೃಹ ಸಚಿವಾಲಯದಲ್ಲಿ ಹಿರಿಯ ಅಧಿಕಾರಿಯಾಗಿದ್ದರು.

ರಾಮ ಮಂದಿರ ಟ್ರಸ್ಟ್ ಸ್ಥಾಪನೆಯಲ್ಲೂ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ರಕ್ಷಣಾ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿ, ಗೃಹ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳ ಸಚಿವಾಲಯ ಹಾಗೂ ಸಹಕಾರ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.