ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ದ್ವಾನಿ ಹಿಂಸಾಚಾರದ ಪ್ರಮುಖ ಸಂಚುಕೋರನ ಬಂಧನ

Published 24 ಫೆಬ್ರುವರಿ 2024, 16:17 IST
Last Updated 24 ಫೆಬ್ರುವರಿ 2024, 16:17 IST
ಅಕ್ಷರ ಗಾತ್ರ

ಹಲ್ದ್ವಾನಿ: ಹಲ್ದ್ವಾನಿ ಹಿಂಸಾಚಾರದ ಪ್ರಮುಖ ಸಂಚುಕೋರ ಅಬ್ದುಲ್‌ ಮಲಿಕ್‌ನನ್ನು ನವದೆಹಲಿಯಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ನೈನಿತಾಲ್‌ ಎಸ್ಎಸ್‌ಎಸ್ಪಿ ನಾರಾಯಣ್‌ ಮೀನಾ ತಿಳಿಸಿದ್ದಾರೆ.

‘ಗುಜರಾತ್, ನವದೆಹಲಿ, ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಲಿಕ್ ಮತ್ತು ಆತನ ಮಗ ಅಬ್ದುಲ್‌ ಮೊಯಿದ್ ಪತ್ತೆ ಹಚ್ಚಲು ಆರು ತಂಡಗಳನ್ನು ರಚಿಸಲಾಗಿತ್ತು. ಅದರಲ್ಲಿ ಒಂದು ತಂಡ  ಮಲ್ಲಿಕ್‌ನನ್ನು ನವದೆಹಲಿಯಲ್ಲಿ ಪತ್ತೆಹಚ್ಚಿ ಬಂಧಿಸಿದ್ದು, ಆತನ ಮಗನ ಸುಳಿವು ಪತ್ತೆಯಾಗಿಲ್ಲ’ ಎಂದು ಮಾಹಿತಿ ನೀಡಿದರು.

ಬನ್‌ಭೂಲ್‌ಪುರದಲ್ಲಿ ಮಲಿಕ್ ಅಕ್ರಮವಾಗಿ ನಿರ್ಮಿಸಿದ್ದ ಮದರಸವನ್ನು ಸ್ಥಳೀಯಾಡಳಿತವು ಫೆಬ್ರವರಿ 8ರಂದು ತೆರವುಗೊಳಿಸಲು ಮುಂದಾದ ಹಿನ್ನೆಲೆ ಘರ್ಷಣೆ ನಡೆದಿತ್ತು. ಹಿಂಸಾಚಾರದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಪೊಲೀಸರು, ಪತ್ರಕರ್ತರು ಸೇರಿದಂತೆ ನೂರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT