ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ದ್ವಾನಿ ಹಿಂಸಾಚಾರ | ಸರ್ಕಾರಿ ಆಸ್ತಿಗಳಿಗೆ ಹಾನಿ: ಆರೋಪಿಗೆ ₹2.44 ಕೋಟಿ ದಂಡ

Published 13 ಫೆಬ್ರುವರಿ 2024, 4:50 IST
Last Updated 13 ಫೆಬ್ರುವರಿ 2024, 4:50 IST
ಅಕ್ಷರ ಗಾತ್ರ

ಲಖನೌ: ಉತ್ತರಾಖಂಡದ ಹಲ್ದ್ವಾನಿ ಪಟ್ಟಣದಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಅಬ್ದುಲ್ ಮಲಿಕ್‌ಗೆ ಸರ್ಕಾರಿ ಆಸ್ತಿಗಳಿಗೆ ಹಾನಿ ಮಾಡಿದ್ದಕ್ಕಾಗಿ ₹2.44 ಕೋಟಿ ದಂಡ ವಿಧಿಸಿ ಇಲ್ಲಿನ ಪುರಸಭೆ ನೋಟಿಸ್‌ ಜಾರಿ ಮಾಡಿದೆ.

ಮಲಿಕ್ ಹಾಗೂ ಬೆಂಬಲಿಗರು ಅಕ್ರಮವಾಗಿ ಕಟ್ಟಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ಬುಲ್ಡೋಜರ್‌ನಿಂದ ಇತ್ತೀಚೆಗೆ ತೆರವುಗೊಳಿಸಲು ಹೋದಾಗ ಆರೋಪಿಗಳು ಸರ್ಕಾರಿ ಆಸ್ತಿಗಳಿಗೆ ಹಾನಿ ಮಾಡಿದ್ದರು. ಮಲಿಕ್‌ ವಿರುದ್ಧ ದಾಖಲಿಸಲಾದ ಎಫ್ಐಆರ್‌ ಮಾಹಿತಿಯನ್ನು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಲಿಕ್‌ನಿಂದ ಆಸ್ತಿಗಳಿಗೆ ಆದ ನಷ್ಟವು ₹2.44 ಕೋಟಿಯಾಗಿದ್ದು, ಫೆಬ್ರುವರಿ 15ರೊಳಗೆ ಹಲ್ದ್ವಾನಿ  ಪುರಸಭೆಗೆ ಪಾವತಿಸಬೇಕು. ಒಂದು ವೇಳೆ ಪಾವತಿ ಮಾಡದಿದ್ದಲ್ಲಿ ಕಾನೂನಿನ ಮೂಲಕ ವಸೂಲಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲ್ದ್ವಾನಿಯಲ್ಲಿ ಅಕ್ರಮವಾಗಿ ಕಟ್ಟಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ಬುಲ್ಡೋಜರ್‌ನಿಂದ ತೆರವುಗೊಳಿಸಿದ ಬೆನ್ನೆಲ್ಲೇ ಹಿಂಸಾಚಾರ ಭುಗಿಲೆದ್ದಿತ್ತು. ಫೆಬ್ರುವರಿ 8 ರಂದು ನಡೆದ ಈ ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT