ಹಮೀರ್ಪುರ್ : ಉತ್ತರ ಪ್ರದೇಶದ ಹಮೀರ್ಪುರ್ನಲ್ಲಿ 15 ವರ್ಷದ ಬಾಲಕಿಯ ಮೇಲೆ ಪೋಷಕರಿಲ್ಲದ ವೇಳೆಯಲ್ಲಿ ಇಬ್ಬರು ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಬ್ಬರು ವ್ಯಕ್ತಿಗಳು ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ ಎಂದು ಚಿಕಾಸಿ ಠಾಣಾ ಪೊಲೀಸರು ಹೇಳಿದ್ದಾರೆ.

ಆ.13 ರಂದು ಬಾಲಕಿಯ ಪೋಷಕರು ತಮ್ಮ ಮೂವರು ಹೆಣ್ಣುಮಕ್ಕಳನ್ನು ಮನೆಯಲ್ಲಿ ಬಿಟ್ಟು ಅತ್ತೆ-ಮಾವನ ಮನೆಗೆ ತೆರಳಿದ್ದರು. ಆ.16 ರ ರಾತ್ರಿ ಗ್ರಾಮದ 30 ವರ್ಷದ ವ್ಯಕ್ತಿಯೊಬ್ಬ ಬಾಲಕಿಯಿದ್ದ ಮನೆಗೆ ಬಂದು ಹತ್ತಿರದ ದನದ ಕೊಟ್ಟಿಗೆಗೆ ಕರೆದುಕೊಂಡು ಹೋಗಿದ್ದಾನೆ. 21 ವರ್ಷದ ಮತ್ತೊಬ್ಬನು ಕೊಟ್ಟಿಗೆಯಲ್ಲಿ ಮೊದಲೇ ಇದ್ದನು. ಬಾಲಕಿಯು ಒಳಗೆ ಹೋದ ತಕ್ಷಣ ಬಾಗಿಲನ್ನು ಮುಚ್ಚಲಾಗಿದೆ. ಅತ್ಯಾಚಾರ ಎಸಗಿದ ಬಳಿಕ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆ.17 ರಂದು ಪೋಷಕರು ಮನೆಗೆ ಮರಳಿದಾಗ ಬಾಲಕಿಯು ನಡೆದ ಘಟನೆಯನ್ನು ವಿವರಿಸಿದ್ದಾಳೆ. ಪೋಷಕರು ಸಾಮಾಜಿಕ ಕಳಂಕ ಮತ್ತು ಸಾರ್ವಜನಿಕ ಅವಮಾನಕ್ಕೆ ಹೆದರಿ ದೂರು ನೀಡಲು ಹಿಂಜರಿದಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಬಾಲಕಿಯ ಪೋಷಕರು ನೀಡಿರುವ ದೂರನ್ನು ಆಧರಿಸಿ ಭಾರತೀಯ ದಂಡ ಸಂಹಿತೆಯಡಿ ಆರೋಪಿಗಳ ವಿರುದ್ದ ಪ್ರಕರಣವನ್ನು ದಾಖಲು ಮಾಡಲಾಗಿದೆ. ಆರೋಪಿಗಳ ಬಂಧನಕ್ಕಾಗಿ ಪೊಲೀಸರ ತಂಡ ರಚಿಸಲಾಗಿದೆ ಎಂದು ಠಾಣಾಧಿಕಾರಿ ಸಂತೋಷ್ ಕುಮಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.