ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನುಮಾನ್‌ ವಿಗ್ರಹ ಧ್ವಂಸ: ವ್ಯಕ್ತಿ ಬಂಧನ, ಇಂಟರ್‌ನೆಟ್‌ ಸೇವೆ ಸ್ಥಗಿತ

Last Updated 4 ಏಪ್ರಿಲ್ 2023, 2:37 IST
ಅಕ್ಷರ ಗಾತ್ರ

ಸಾಹಿಬ್‌ಗಂಜ್‌ (ಜಾರ್ಖಂಡ್‌): ಇಲ್ಲಿಯ ದೇವಸ್ಥಾನವೊಂದರಲ್ಲಿದ್ದ ಒಂದೂವರೆ ಅಡಿ ಎತ್ತರದ ಹನುಮಾನ್‌ ವಿಗ್ರಹವನ್ನು ದುಷ್ಕರ್ಮಿಗಳು ಸೋಮವಾರ ಧ್ವಂಸಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಬಲಪಂಥೀಯ ಕಾರ್ಯಕರ್ತರು ಮತ್ತು ಸ್ಥಳೀಯರು ದೇವಾಲಯದ ಬಳಿ ಸೇರಿ ರಸ್ತೆ ತಡೆದು, ದುಷ್ಕರ್ಮಿಗಳನ್ನು ಬಂಧಿಸುವಂತೆ ಧರಣಿ ನಡೆಸಿದ್ದಾರೆ. ಗುಂಪು ಚದುರಿಸಲು ಲಾಠಿ ಚಾರ್ಜ್‌ ನಡೆಸಲಾಗಿದೆ. ಜೊತೆಗೆ ಮುಂಜಾಗೃತಾ ಕ್ರಮವಾಗಿ 24 ಗಂಟೆಗಳ ಕಾಲ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ನಸುಕಿನಲ್ಲಿ ವಿಗ್ರಹ ದ್ವಂಸಗೊಳಿಸಿದ್ದು, ಅದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಾನಿಗೊಂಡ ವಿಗ್ರಹವನ್ನು ಪೊಲೀಸ್‌ ಠಾಣೆಯಲ್ಲಿ ಇರಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಪೊಲೀಸ್‌ ಉಪ ಆಯುಕ್ತ ರಾಮ್‌ನಿವಾಸ್‌ ಯಾದವ್‌ ಪಿಟಿಐಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT