ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Har Ghar Tiranga | ಪ್ರೊಫೈಲ್ ಚಿತ್ರ ರಾಷ್ಟ್ರಧ್ವಜವಾಗಿ ಬದಲಿಸಲು ಪ್ರಧಾನಿ ಕರೆ

Published 13 ಆಗಸ್ಟ್ 2023, 5:00 IST
Last Updated 13 ಆಗಸ್ಟ್ 2023, 5:00 IST
ಅಕ್ಷರ ಗಾತ್ರ

ನವದೆಹಲಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ 'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರವನ್ನು (ಡಿಪಿ) ತ್ರಿವರ್ಣ ಧ್ವಜವಾಗಿ ಬದಲಾಯಿಸಲು ಪ್ರಧಾನಿ ಮೋದಿ, ದೇಶದ ಜನತೆಗೆ ವಿನಂತಿ ಮಾಡಿದ್ದಾರೆ.

ಈ ಮೂಲಕ ದೇಶ ಮತ್ತು ನಮ್ಮ ನಡುವಿನ ಬಾಂಧವ್ಯ ಮತ್ತಷ್ಟು ಗಾಢವಾಗಲಿದೆ ಎಂದು ಹೇಳಿದ್ದಾರೆ.

ಈ ಮೊದಲು ತಿರಂಗಾ ಜೊತೆ ಫೋಟೊ ತೆಗೆದು ಹರ್ ಘರ್ ತಿರಂಗಾ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಪ್ರಧಾನಿ ಕರೆ ನೀಡಿದ್ದರು.

ಹರ್ ಘರ್ ತಿರಂಗಾ ಅಭಿಯಾನವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಹೊಸ ಚೈತನ್ಯ ನೀಡಲಿದೆ. ದೇಶವಾಸಿಗಳು ಈ ಅಭಿಯಾನವನ್ನು ಈ ವರ್ಷ ಹೊಸ ಎತ್ತರಕ್ಕೆ ಕೊಂಡೊಯ್ಯಬೇಕು. ಆಗಸ್ಟ್ 13ರಿಂದ 15ರ ನಡುವೆ ದೇಶದ ಹೆಮ್ಮೆಯ ಸಂಕೇತವಾದ ರಾಷ್ಟ್ರಧ್ವಜವನ್ನು ಹಾರಿಸಿ. ರಾಷ್ಟ್ರಧ್ವಜದೊಂದಿಗೆ ನಿಮ್ಮ ಫೋಟೊಗಳನ್ನು ಅಪ್‌ಲೋಡ್ ಮಾಡಿ ಎಂದು ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT