ಹರಿಹರ: 12 ವರ್ಷಗಳಿಂದ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವ ಕೇಂದ್ರದ ಎನ್ಡಿಎ ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕೆಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಹೇಳಿದರು.

ನಗರದ ಎಚ್.ಕೆ.ವೀರಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿಜೆಪಿ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಮಾತನಾಡಿದರು.

ದೇಶ ಮೊದಲು, ಪಕ್ಷ ನಂತರ ಎನ್ನುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಏಕೈಕ ರಾಜಕೀಯ ಪಕ್ಷ ಬಿಜೆಪಿ. ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷವಾಗಿ ಹೊರಹೊಮ್ಮಿದೆ. ಕಾರ್ಯಕರ್ತರಲ್ಲಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದರು.

‘ಪಕ್ಷದ ನೆಲೆಯೇ ಇಲ್ಲದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದೆ ಎಂದರೆ ಅದು ಕಾರ್ಯಕರ್ತರ ಪರಿಶ್ರಮದ ಫಲ. ಅಪ್ಪಟ ದೇಶಭಕ್ತರ ಪಕ್ಷವಾಗಿರುವ ಬಿಜೆಪಿಯಲ್ಲಿ ಕಾರ್ಯನಿರ್ವ ಹಿಸುವ ಎಲ್ಲರೂ ಪ್ರಾಮಾಣಿಕರು ಎಂಬುದಾಗಿ ಪ್ರಜ್ಞಾವಂತರು ಗುರುತಿಸುತ್ತಿದ್ದಾರೆ’ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

‘ರಾಜಕೀಯ ಪಕ್ಷದಲ್ಲಿ ಕಾರ್ಯಕರ್ತರಿಗೆ ಪ್ರಶಿಕ್ಷಣ ನೀಡುವ ಪದ್ಧತಿ ಕೇವಲ ಬಿಜೆಪಿಯಲ್ಲಿದೆ. ಇದು ಅಧಿಕಾರಕ್ಕಾಗಿ ಕಟ್ಟಿದ ಪಕ್ಷವಲ್ಲ, ಸೈದ್ಧಾಂತಿಕ ತಳಹದಿ ಮೇಲೆ ನಿಂತಿರುವ ಪಕ್ಷ. ಪಂಡಿತ್ ದೀನದಯಾಳ್ ಉಪಾಧ್ಯಾಯರ ನೆನಪಿನಲ್ಲಿ ನಡೆಯುವ ಈ ಕಾರ್ಯಾಗಾರದ ಮೂಲ ಉದ್ದೇಶ ತಳಮಟ್ಟದಿಂದ ಕಾರ್ಯಕರ್ತರನ್ನು ಗಟ್ಟಿಗೊಳಿಸುವುದಾಗಿದೆ’ ಎಂದು ಶಿವಮೊಗ್ಗ ವಿಭಾಗದ ಶಾರೀರಿಕ ಪ್ರಮುಖ್ ಪ್ರಕಾಶ್ ಹರಳಹಳ್ಳಿ ಹೇಳಿದರು.

‘ಸಂಘಟಿತ ಶಕ್ತಿ, ಸಮರ್ಪಣಾ ಭಾವ ಹಾಗೂ ಜನಸೇವೆಯೇ ಪಕ್ಷದ ಮೂಲ ತತ್ವಗಳಾಗಿದ್ದು, ಪ್ರಶಿಕ್ಷಾ ವರ್ಗವು ಕಾರ್ಯಕರ್ತರಲ್ಲಿ ಒಗ್ಗಟ್ಟು ಮತ್ತು ಶಿಸ್ತು ಮೂಡಿಸಲು ಪೂರಕವಾಗಿದೆ’ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಹೇಳಿದರು.

ಕಾರ್ಯಾಗಾರದಲ್ಲಿ ಬಿಜೆಪಿ ಇತಿಹಾಸ-ವಿಕಾಸ, ಬೂತ್ ನಿರ್ವಹಣೆ, ಸಾಮಾಜಿಕ ಜಾಲತಾಣ, ಮಾಧ್ಯಮ, ಕಾರ್ಯ ವಿಸ್ತರಣೆ, ಸರ್ಕಾರದ ಸಾಧನೆಗಳು, ಕಾರ್ಯಪದ್ಧತಿ ಹಾಗೂ ಸೈದ್ಧಾಂತಿಕ ಅಧಿಷ್ಠಾನ ಕುರಿತು ಅರಿವು ಮೂಡಿಸಲಾಯಿತು. ಪಕ್ಷದ ಗ್ರಾಮಾಂತರ ಘಟಕದ ಅಧ್ಯಕ್ಷ ಲಿಂಗರಾಜ್ ಹಿಂಡಸಘಟ್ಟ ಹಾಗೂ ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್ ಅಧ್ಯಕ್ಷತೆ ವಹಿಸಿದ್ದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಐರಣಿ ಅಣ್ಣೇಶ್, ನಗರಸಭೆ ಮಾಜಿ ಸದಸ್ಯರಾದ ಆಟೊ ಹನುಮಂತಪ್ಪ, ಅಶ್ವಿನಿ ಕೃಷ್ಣ, ಮಲೇಬೆನ್ನೂರು ಪುರಸಭಾ ಸದಸ್ಯ ಸಿದ್ದೇಶ್ ಬೆಣ್ಣಿಹಳ್ಳಿ, ಪಕ್ಷದ ಹರಿಹರ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಮಂಜಾನಾಯ್ಕ, ತುಳಜಪ್ಪ ಭೂತೆ, ಕೆ.ಎನ್. ಹಳ್ಳಿ ಮಹಾಂತೇಶ್, ವೀರೇಶ್ ಆದಾಪುರ, ಮುಖಂಡರಾದ ರಾಜು ರೋಖಡೆ, ಬಾತಿ ಚಂದ್ರಶೇಖರ್, ಮಹಿಳಾ ಘಟಕದ ಪ್ರಮೀಳಾ ನಲ್ಲೂರು, ರೂಪಾ ಕಾಟ್ವೆ, ಸಂತೋಷಿ ಮೋಹಿತೆ, ಸಾಕ್ಷಿ ಶಿಂದೆ, ಅಂಬುಜಾ ರಾಜೋಳಿ, ರಶ್ಮಿ ಮೆಹರ್ವಾಡೆ, ರೂಪಾ ಶಶಿಕಾಂತ್ ಹಾಗೂ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-43-2116185628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.