ನವದೆಹಲಿ: ಜೆಡಿಯು ನಾಯಕ ಹರಿವಂಶ್ ನಾರಾಯಣ್ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಲ್ಮನೆಯ (ರಾಜ್ಯಸಭೆ) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ.

ರಾಜ್ಯಸಭಾ ಸದಸ್ಯರಾಗಿ ಹರಿವಂಶ್ ನಾರಾಯಣ್ ಸಿಂಗ್ ಅವರ ಅಧಿಕಾರಾವಧಿಯು ಏಪ್ರಿಲ್ 9ರಂದು ಮುಕ್ತಾಯಗೊಂಡಿತ್ತು. ನಿವೃತ್ತ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಹರಿವಂಶ್ರನ್ನು ನಾಮನಿರ್ದೇಶನ ಮಾಡಲಾಗಿದೆ.

69 ವರ್ಷದ ಹರಿವಂಶ್ ಅವರು ಬಿಹಾರ ಪ್ರತಿನಿಧಿಸುವ ರಾಜ್ಯಸಭಾ ಸದಸ್ಯರಾಗಿ ಈಗಾಗಲೇ ಎರಡು ಅವಧಿ ಪೂರೈಸಿದ್ದಾರೆ. ಅಲ್ಲದೆ, ಅವರು ಮೇಲ್ಮನೆಯ ಉಪಸಭಾಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.