ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Haryana Assembly Election 2024: ಬಿಜೆಪಿ ಮೊದಲ ಪಟ್ಟಿ ಪ್ರಕಟ

Published : 4 ಸೆಪ್ಟೆಂಬರ್ 2024, 16:25 IST
Last Updated : 4 ಸೆಪ್ಟೆಂಬರ್ 2024, 16:25 IST
ಫಾಲೋ ಮಾಡಿ
Comments

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಅವರು ಕುರುಕ್ಷೇತ್ರ ಜಿಲ್ಲೆಯ ಲಾಡವಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಸೈನಿ ಅವರು ಈಗ ಕರನಾಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಪಕ್ಷದ ಹಿರಿಯ ನಾಯಕ ಅನಿಲ್ ವಿಜ್ ಅವರು ಅಂಬಾಲಾ ಕೈಂಟ್ ಕ್ಷೇತ್ರದಿಂದ ಮತ್ತೆ ಕಣಕ್ಕೆ ಇಳಿಯಲಿದ್ದಾರೆ. ಮಾಜಿ ಸಂಸದ ಅರವಿಂದ ಶರ್ಮ ಅವರು ಗೋಹಾನಾ ಕ್ಷೇತ್ರದಿಂದ ಅದೃಷ್ಟಪರೀಕ್ಷೆಗೆ ಇಳಿಯಲಿದ್ದಾರೆ.

ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದ ಪ್ರಬಲ ರಾಜಕೀಯ ಕುಟುಂಬಗಳ ಕುಡಿಗಳಿಗೂ ಮಣೆ ಹಾಕಲಾಗಿದೆ. ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಮೊಮ್ಮಗ ಭವ್ಯ ಬಿಷ್ಣೊಯ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬನ್ಸಿಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ಅವರು ಕೂಡ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಶ್ರುತಿ ಅವರು 2009ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. ಅವರು ಕಳೆದ ತಿಂಗಳು ತಮ್ಮ ತಾಯಿ ಕಿರಣ್ ಚೌಧರಿ ಅವರ ಜೊತೆ ಬಿಜೆಪಿ ಸೇರಿದ್ದರು. ಕಿರಣ್ ಅವರನ್ನು ಬಿಜೆಪಿಯು ರಾಜ್ಯಸಭಾ ಸದಸ್ಯರನ್ನಾಗಿಸಿದೆ.

ಕೇಂದ್ರ ಸಚಿವ ರಾವ್ ಇಂದ್ರಜಿತ್ ಸಿಂಗ್ ಅವರ ಮಗಳು ಆರತಿ ಸಿಂಗ್ ರಾವ್ ಅವರು ಅಟೇಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ.

ಬಿಜೆಪಿಯ ಹಿರಿಯ ನಾಯಕರಾದ ಮಾಜಿ ಸಚಿವ ಕ್ಯಾಪ್ಟನ್ ಅಭಿಮನ್ಯು ಅವರು ನಾರನೌಂದ್ ಕ್ಷೇತ್ರದಿಂದ, ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಒ.ಪಿ. ಧನಕರ್ ಅವರು ಕೂಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಮೊದಲ ಪಟ್ಟಿಯಲ್ಲಿ ಒಟ್ಟು ಒಂಬತ್ತು ಮಂದಿ ಮಹಿಳೆಯರು ಸ್ಥಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT