ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಲ್ ವಿಧಾನಸಭಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಹರಿಯಾಣ ಸಿಎಂ

Published 6 ಮೇ 2024, 10:32 IST
Last Updated 6 ಮೇ 2024, 10:32 IST
ಅಕ್ಷರ ಗಾತ್ರ

ಚಂಡೀಗಢ: ಮೇ 25 ರಂದು ನಡೆಯಲಿರುವ ಕರ್ನಾಲ್ ವಿಧಾನಸಭಾ ಉಪಚುನಾವಣೆಗೆ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೋಮವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮೊದಲು ಸೈನಿ ಹಾಗೂ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಕರ್ನಾಲ್‌ನಲ್ಲಿ ರೋಡ್‌ ಶೋ ನಡೆಸಿದರು.

ಬಳಿಕ ಸುದ್ದಿಗಾರರಿಗೆ ಮಾತನಾಡಿದ ಸೈನಿ, 'ಕರ್ನಾಲ್‌ನಲ್ಲಿ ಮಾತ್ರವಲ್ಲದೆ ಎಲ್ಲೆಡೆ ಬಿಜೆಪಿಗೆ ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ. ನಾವು ದೊಡ್ಡ ಜನಾದೇಶದೊಂದಿಗೆ ಗೆಲ್ಲುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ದೇಶ ಪ್ರಗತಿಯ ಪಥದಲ್ಲಿ ಮುನ್ನಡೆದಿದೆ' ಎಂದರು.‌

‌ಹರಿಯಾಣದ 10 ಲೋಕಸಭಾ ಸ್ಥಾನಗಳಿಗೆ ಮತ್ತು ಖಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಲ್ ವಿಧಾನಸಭಾ ಸ್ಥಾನಕ್ಕೆ ಮೇ 25 ರಂದು ಚುನಾವಣೆ ನಡೆಯಲಿದೆ.

ಕರ್ನಾಲ್ ವಿಧಾನಸಭಾ ಉಪಚುನಾವಣೆಯಲ್ಲಿ ನಯಾಬ್ ಸೈನಿ ಅವರು ಕಾಂಗ್ರೆಸ್ ಪ್ರತಿಸ್ಪರ್ಧಿ ತರ್ಲೋಚನ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT