ಚಂಡೀಗಡ:ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಸ್ಥಳದಿಂದ ಹಳ್ಳಿಗಳಿಗೂ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗನೇ ಹೋರಾಟವನ್ನುಸ್ಥಗಿತಗೊಳಿಸುವಂತೆಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖಟ್ಟರ್, ಕೊರೊನಾವೈರಸ್ ಸಾಂಕ್ರಾಮಿಕ ರೋಗ ಹರಡುವುದನ್ನು ಗಮನದಲ್ಲಿಟ್ಟುಕೊಂಡು ನಾನು ಮತ್ತೊಮ್ಮೆ ರೈತ ಮುಖಂಡರಿಗೆ ಪ್ರತಿಭಟನೆಯನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡುತ್ತೇನೆ. ಈ ಬಿಕ್ಕಟ್ಟಿನ ಸಮಯದಲ್ಲಿ ಜನರಪ್ರಾಣ ಉಳಿಸುವುದು ನಮ್ಮೆಲ್ಲರ ಏಕೈಕ ಗುರಿಯಾಗಬೇಕು. ಮಾನವ ಜೀವಗಿಂತಲೂ ಮಿಗಿಲಾಗಿ ಬೇರೇನೂ ಇಲ್ಲ ಎಂದಿದ್ದಾರೆ.

ಈ ಪ್ರತಿಭಟನೆಯಿಂದಾಗಿ ಅನೇಕ ಹಳ್ಳಿಗಳಲ್ಲಿ ಹಾಟ್‌ಸ್ಪಾಟ್ ಪ್ರದೇಶಗಳು ನಿರ್ಮಾಣವಾಗಿದೆ. ಯಾಕೆಂದರೆ ಜನರು ನಿಯಮಿತವಾಗಿ ಪ್ರತಿಭಟನೆ ಸ್ಥಳದಿಂದ ಹಳ್ಳಿಗಳಿಗೆತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:'ಕೊರೊನಾ ಒಂದು ಜೀವಿ, ಅದಕ್ಕೂ ಬದುಕುವ ಹಕ್ಕಿದೆ'–ಉತ್ತರಾಖಂಡದ ಮಾಜಿ ಸಿಎಂ ರಾವತ್

ಒಂದು ತಿಂಗಳ ಹಿಂದೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಸ್ಥಗಿತಗೊಳಿಸುವಂತೆ ನಾನು ರೈತ ಮುಖಂಡರಿಗೆ ಮನವಿ ಮಾಡಿದ್ದೇನೆ. ಬೇಕಿದ್ದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ಪುನರಾರಂಭಿಸಬಹುದು. ಪ್ರತಿಭಟನಾ ಸ್ಥಳಗಳಿಂದ ಗ್ರಾಮಸ್ಥರು ತಮ್ಮ ಹಳ್ಳಿಗಳಿಗೆ ಹೋಗಿ ಬರುವುದರಿಂದ ಹಲವು ಕಡೆಗಳಲ್ಲಿ ಹಾಟ್ ಸ್ಪಾಟ್ ನಿರ್ಮಾಣವಾಗಿದೆ ಎಂದು ಖಟ್ಟರ್ ವಿವರಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲೂ ಹಾಟ್‌ಸ್ಪಾಟ್ ಗುರುತಿಸಲಾಗಿದೆ. ಆರೋಗ್ಯ ಇಲಾಖೆಯ 8,000 ತಂಡಗಳು ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ತಪಾಸಣೆ ನಡೆಸುತ್ತಿವೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿವಾದಿತ ಮೂರು ನೂತಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ಕಳೆದ ವರ್ಷ ನವೆಂಬರ್ 26ರಿಂದಲೇ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಏತನ್ಮಧ್ಯೆ ಹರಿಯಾಣದಲ್ಲಿ ಮೇ 17ರ ವರೆಗೆ ಕೋವಿಡ್ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.