ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಯಾಣ ಚುನಾವಣೆ: ವಿನೇಶ್ ಫೋಗಟ್‌ ಜುಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

Published : 7 ಸೆಪ್ಟೆಂಬರ್ 2024, 6:05 IST
Last Updated : 7 ಸೆಪ್ಟೆಂಬರ್ 2024, 6:05 IST
ಫಾಲೋ ಮಾಡಿ
Comments

ನವದೆಹಲಿ/ ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ 32 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿದೆ.

ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಗಡಿ ಸಂಪ್ಲಾ ಕಿಲೋಯ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನ್ ಅವರನ್ನು ಹೊಡಲ್ ಹಾಗೂ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಜುಲಾನಾ ಕ್ಷೇತ್ರದಿಂದ ಉಮೇದುವಾರರನ್ನಾಗಿ ಮಾಡಿದೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಯಿತು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್‌, ಹರಿಯಾಣ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಬಾರಿಯಾ, ದೀಪಿಂದರ್ ಸಿಂಗ್ ಹೂಡ ಸಭೆಯಲ್ಲಿ ಭಾಗಿಯಾಗಿದ್ದರು.

32 ಮಂದಿಯ ಪೈಕಿ 28 ಹಾಲಿ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ವಿನೇಶ್ ಫೋಗಟ್ ಸೇರಿ ಐವರು ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT