ಚಂಡೀಗಢ: ಹಿಂಸಾಚಾರ ಪೀಡಿತ ನೂಹ್‌ನಲ್ಲಿ ಅಕ್ರಮ ಕಟ್ಟಡಗಳ ನೆಲಸಮಗೊಳಿಸುವ ಕಾರ್ಯಾಚರಣೆಗೂ ಮೊದಲು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿರಲಿಲ್ಲ ಮತ್ತು ಅದು ‘ಜನಾಂಗೀಯ ಶುದ್ಧಿ’ ಕಾರ್ಯಾಚರಣೆಯಂತಿತ್ತು ಎಂಬ ಹೈಕೋರ್ಟ್ ಅಭಿಪ್ರಾಯವನ್ನು ಹರಿಯಾಣ ಸರ್ಕಾರ ಶುಕ್ರವಾರ ಅಲ್ಲಗಳೆದಿದೆ.
ಮುಸ್ಲಿಂ ಸಮುದಾಯದವರು ಪ್ರಧಾನವಾಗಿರುವ ನೂಹ್‌ನಲ್ಲಿ ಅಕ್ರಮ ಕಟ್ಟಡಗಳ ನೆಲಸಮಗೊಳಿಸುವ ಪ್ರಕ್ರಿಯೆಗೆ ಸೋಮವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತಡೆ ನೀಡಿತ್ತು. ನಿರ್ದಿಷ್ಟ ಸಮುದಾಯದ ಜನರನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗುತ್ತಿದೆಯೇ ಎಂದೂ ಪ್ರಶ್ನಿಸಿತ್ತು.
ಶುಕ್ರವಾರ ನ್ಯಾಯಮೂರ್ತಿಗಳಾದ ಅರುಣ್ ಪಲ್ಲಿ ಮತ್ತು ಜಗಮೋಹನ ಬನ್ಸಾಲ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಹರಿಯಾಣ ಸರ್ಕಾರದ ಪರ ವಕೀಲ ದೀಪ್ ಸಭರ್‌ವಾಲ್ ಅವರು, ‘ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ ವೇಳೆ ಎಲ್ಲ ಪ್ರಕ್ರಿಯೆಗಳನ್ನೂ ಪೂರ್ಣಗೊಳಿಸಲಾಗಿದೆ. ರಾಜ್ಯದ ಮುಂದೆ ಎಲ್ಲರೂ ಸಮಾನರು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.