ಚಂಡೀಗಢ: ಭಾರಿ ಮಳೆಯಿಂದ ರಾಜ್ಯದ ವಿವಿಧೆಡೆ ಮನೆಗಳು ಕುಸಿದು 12 ಮಂದಿ ಮೃತಪಟ್ಟಿದ್ದಾರೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ತಿಳಿಸಿದ್ದಾರೆ.

‘ಮೃತ ಕುಟುಂಬಗಳ ಸದಸ್ಯರಿಗೆ ತಲಾ ₹4 ಲಕ್ಷದಂತೆ ₹48 ಲಕ್ಷ ಪರಿಹಾರ ವಿತರಿಸಲಾಗಿದೆ’ ಎಂದು ಹೇಳಿದ್ದಾರೆ.

‘ಫತೇಹಾಬಾದ್, ಭಿವಾನಿ ಹಾಗೂ ಕುರುಕ್ಷೇತ್ರ ಜಿಲ್ಲೆಗಳಲ್ಲಿ ಮನೆಗಳು ಕುಸಿದು ಜನರು ಮೃತಪಟ್ಟಿದ್ದು, ಮಳೆಯಿಂದ ಮುಳುಗಡೆಯಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ’ ಎಂದು ಸೈನಿ ತಿಳಿಸಿದ್ದಾರೆ.

‘ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ಪಕ್ಷದ ಎಲ್ಲ ಶಾಸಕರು, ಸಚಿವರು, ಮೂವರು ಪಕ್ಷೇತರ ಶಾಸಕರು ಒಂದು ತಿಂಗಳ ವೇತನ ನೀಡಲು ನಿರ್ಧರಿಸಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.