ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಉಸಿರುಗಟ್ಟಿಸಿ ಕೊಲೆ

Published 3 ಮಾರ್ಚ್ 2024, 2:49 IST
Last Updated 3 ಮಾರ್ಚ್ 2024, 2:49 IST
ಅಕ್ಷರ ಗಾತ್ರ

ನೂಹ್: ತನ್ನ 8 ವರ್ಷದ ಸೊಸೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

27 ವರ್ಷದ ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿದ್ದು, ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಹೊಲವೊಂದರಲ್ಲಿ ಹೂತು ಹಾಕಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹೊಲಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾಗಿಯೂ, ಆಕೆ ಅಳಲು ಶುರುವಿಟ್ಟಾಗ ತನ್ನ ಕೈಗಳಿಂದ ಆಕೆಯ ಬಾಯಿಯನ್ನು ಮುಚ್ಚಿದ್ದರಿಂದ ಉಸಿರುಗಟ್ಟಿ ಆಕೆ ಮೃತಪಟ್ಟಿದಾಗಿಯೂ ಆರೋಪಿ ವಿಚಾರಣೆ ವೇಳೆ ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ.

ಬಳಿಕ ಆಕೆಯನ್ನು ಅಲ್ಲೇ ಹೂತು ಹಾಕಿದ್ದಾನೆ.

ಮನೆಯ ಬಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ಆಕೆ ಬುಧವಾರ ಕಾಣೆಯಾಗಿದ್ದಳು ಎಂದು ಪೊಲೀಸರು ನೀಡಿದ ಮಾಹಿತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT