ಚಂಡೀಗಡ: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಶಂಕಿತ ನಕಲಿ ಮದ್ಯ ಸೇವನೆಯಿಂದ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಸಾವಿಗೆ ನಿಖರ ಕಾರಣ ಪತ್ತೆಹಚ್ಚಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನಕಲಿ ಮದ್ಯ ಸೇವನೆಯ ಶಂಕೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನಮಗೆ ದೊರಕಿದೆ. ಈ ಕುರಿತು ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ತಿಳಿದು ಬರಲಿದೆ. ಆದರೆ ಇನ್ನುಳಿದ ಐದು ಮಂದಿಯ ಮೃತದೇಹಗಳಿಗೆ ಅವರ ಕುಟುಂಬದವರು ಈಗಾಗಲೇ ಅತ್ಯಸಂಸ್ಕಾರ ನೆರವೇರಿಸಿದ್ದಾರೆ ಎಂದು ಯಮುನಾನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗಂಗಾರಾಮ್ ಪೂನಿಯಾ ಹೇಳಿದ್ದಾರೆ.