ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣ ಪೊಲೀಸರಿಂದ ರೈತ ಹೋರಾಟಗಾರ ನವದೀಪ್ ಸಿಂಗ್ ಬಂಧನ

Published 30 ಮಾರ್ಚ್ 2024, 5:50 IST
Last Updated 30 ಮಾರ್ಚ್ 2024, 5:50 IST
ಅಕ್ಷರ ಗಾತ್ರ

ಅಂಬಾಲಾ: ರೈತರ ‘ದೆಹಲಿ ಚಲೋ’ ಪ್ರತಿಭಟನೆಯ ವೇಳೆ ದಾಖಲಾಗಿದ್ದ ಎಫ್‌ಐಆರ್‌ಗೆ ಸಂಬಂಧಿಸಿ ರೈತ ಹೋರಾಟಗಾರ ನವದೀಪ್ ಸಿಂಗ್ ಜಲ್ಬೇರಾ ಅವರನ್ನು ಹರಿಯಾಣ ಪೊಲೀಸರು ಇಂದು (ಶನಿವಾರ) ಬಂಧಿಸಿದ್ದಾರೆ.

ಫೆಬ್ರುವರಿ 21ರಂದು ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಮೃತಪಟ್ಟಿದ್ದ ಪಂಜಾಬ್‌ನ ಬಟಿಂಡಾದ ಯುವ ರೈತ ಶುಭಕರನ್ ಸಿಂಗ್ (21) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮುಕ್ತಿ ಮೋರ್ಚಾ (ಕೆಎಂಎಂ) ಭಾನುವಾರ ಆಯೋಜಿಸಿದ್ದ ಸಭೆಗೂ ಮುನ್ನವೇ ಈ ಬೆಳವಣಿಗೆ ನಡೆದಿದೆ.

ಅಂಬಾಲಾ ಪೊಲೀಸರು ಮೊಹಾಲಿಯಿಂದ ಜಲ್ಬೇರಾ ಅವರನ್ನು ಬಂಧಿಸಿದ್ದಾರೆ. ಸದ್ಯ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಮೇಲೆ ಹಲ್ಲೆ ಸೇರಿದಂತೆ ಐಪಿಸಿ ಸೆಕ್ಷನ್‌ 307ರ (ಕೊಲೆ ಯತ್ನ) ಅಡಿಯಲ್ಲಿ ಫೆ. 13ರಂದು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೀಪ್ ಸಿಂಗ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2020ರ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಸಿದ್ದ ಪ್ರತಿಭಟನೆಯಲ್ಲೂ ನವದೀಪ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT