ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್–ಎಎಪಿ ಮೈತ್ರಿ ಕುರಿತ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗುಪ್ತಾ, ‘ಆಮ್ ಆದ್ಮಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇಂದು ಸಂಜೆಯೊಳಗೆ 90 ಕ್ಷೇತ್ರಗಳ ಎಲ್ಲಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ‘ ಎಂದು ತಿಳಿಸಿದ್ದಾರೆ.
‘ಉಭಯ ಪಕ್ಷಗಳ ನಡುವೆ ಮಾತುಕತೆ ಸ್ಥಗಿತಗೊಂಡಿದ್ದು, ಎಎಪಿ 10 ಕ್ಷೇತ್ರಗಳಿಗೆ ಬೇಡಿಕೆ ಇಟ್ಟರೆ, ಕಾಂಗ್ರೆಸ್ 5 ಕ್ಷೇತ್ರಗಳನ್ನು ಬಿಟ್ಟು ಕೊಡುವುದಾಗಿ ಹೇಳಿದೆ. ಈ ಕುರಿತು ಕಾಂಗ್ರೆಸ್ ಪ್ರತಿಕ್ರಿಯೆಗಾಗಿ ಎಎಪಿ ಕಾಯುತ್ತಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಅವರು ಹೇಳಿದ್ದಾರೆ.
ಹರಿಯಾಣ ವಿಧಾನಸಭೆಯ 90 ಸ್ಥಾನಗಳಿಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 12 ಕೊನೆಯ ದಿನ.