ಗುರುಗ್ರಾಮ: ಬಿಜೆಪಿ ರಾಜ್ಯ ನಾಯಕತ್ವವು ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ ಐವರ ಹೆಸರುಗಳನ್ನು ಅಂತಿಮಗೊಳಿಸಿದ್ದು, ಹೈಕಮಾಂಡ್‌ಗೆ ಪಟ್ಟಿ ಕಳುಹಿಸಲಿದೆ ಎಂದು ಮೂಲಗಳು ತಿಳಿಸಿವೆ.
ಗುರುಗ್ರಾಮದಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಎರಡು ದಿನ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ಸಮಿತಿಯು ಅಭ್ಯರ್ಥಿಗಳ ಹೆಸರುಗಳನ್ನು ಆಯ್ಕೆ ಮಾಡಿದೆ.
ಶುಕ್ರವಾರ ಹಾಗೂ ಶನಿವಾರ ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ನಿಗದಿಯಾಗಿದ್ದ ಸಭೆಯಲ್ಲಿ ಹಲವು ನಾಯಕರು ಪಾಲ್ಗೊಂಡಿದ್ದರು. ಪ್ರತಿ ಕ್ಷೇತ್ರದ ಕಾರ್ಯಕರ್ತರಿಂದ ಸಲಹೆಗಳನ್ನು ಆಲಿಸಿದ್ದಾರೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅದೇ ತಿಂಗಳ 4ರಂದು ಫಲಿತಾಂಶ ಪ್ರಕಟವಾಗಲಿದೆ.