ಆಸ್ಪತ್ರೆಗೆ ದಾಖಲಾಗಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನಮಗೆ ದೊರಕಿದೆ. ಈ ಕುರಿತು ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ತಿಳಿದು ಬರಲಿದೆ. ಆದರೆ, ಇನ್ನುಳಿದ ಐದು ಮಂದಿಯ ಮೃತದೇಹಗಳನ್ನು ಅವರ ಕುಟುಂಬದವರು ಈಗಾಗಲೇ ಅತ್ಯಸಂಸ್ಕಾರ ನೆರವೇರಿಸಿದ್ದಾರೆ ಎಂದು ಯಮುನಾನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗಂಗಾರಾಮ್ ಪೂನಿಯಾ ಹೇಳಿದ್ದಾರೆ.