ಚಂಡೀಗಢ: ಹರಿಯಾಣದ ಪಾಣಿಪತ್‌ನಲ್ಲಿ ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.
ಈ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಆರೋಪಿಗಳು ಚಾಕು ಮತ್ತು ಇತರ ಹರಿತವಾದ ಆಯುಧಗಳನ್ನು ಹೊಂದಿದ್ದರು ಎಂದು ಕಟುಂಬದವರು ಹೇಳಿದ್ದಾರೆ.
ಮನೆಗೆ ನುಗಿದ್ದ ದುಷ್ಕರ್ಮಿಗಳು ಕುಟುಂಬದ ಇತರೆ ಸದಸ್ಯರನ್ನು ಕಟ್ಟಿಹಾಕಿ, ಮೂವರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ನಡೆದ ಸ್ಥಳದಿಂದ ಒಂದು ಕಿ.ಮೀಟರ್ ದೂರದಲ್ಲಿ ಅಸ್ವಸ್ಥ ಮಹಿಳೆ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.
ಈ ಎರಡು ಘಟನೆಗಳು ಒಂದೇ ಗ್ರಾಮದಲ್ಲಿ ನಡೆದಿವೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.