ಗಿರ್ ಸೋಮನಾಥ್: ರಾಮನವಮಿಯಂದು ಊನಾದಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಊನಾದ ಪೊಲೀಸರ ಮುಂದೆ ಕಾಜಲ್ ಅವರು ಭಾನುವಾರ ಶರಣಾಗಿದ್ದಾರೆ. ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಹೇಳಿದ್ದಾರೆ.

ವಿಶ್ವ ಹಿಂದೂ ಪರಿಷತ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾಜಲ್ ಅವರು ದ್ವೇಷ ಭಾಷಣ ಮಾಡಿದ ಬಳಿಕ ಊನಾದಲ್ಲಿ ಕೋಮು ಹಿಂಸಾಚಾರ ನಡೆದಿತ್ತು. ಬಳಿಕ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಟ್ವಿಟ್ಟರ್‌ನಲ್ಲಿ ಕಾಜಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 92 ಸಾವಿರಕ್ಕೂ ಹೆಚ್ಚು ಮಂದಿ ಫಾಲೋವರ್ಸ್ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.