ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Hathras Tragedy | ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿ ಕೋರ್ಟ್‌ಗೆ ಅರ್ಜಿ

Published 3 ಜುಲೈ 2024, 5:59 IST
Last Updated 3 ಜುಲೈ 2024, 5:59 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯ ಫೂಲರಾಯ್ ಗ್ರಾಮದಲ್ಲಿ ಆಯೋಜಿಸಿದ್ದ ‘ಸತ್ಸಂಗ’ದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಐವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸಾರ್ವಜನಿಕ ಸಭೆಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸುವಂತೆ ತಜ್ಞರ ಸಮಿತಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಹಾಥರಸ್‌ ಕಾಲ್ತುಳಿತ ಪ್ರಕರಣ ಸಂಬಂಧ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡುವ ಮೂಲಕ ನಿರ್ಲಕ್ಷ್ಯವಹಿಸಿದ ವ್ಯಕ್ತಿಗಳು, ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಪೈಕಿ ಬಹುತೇಕರನ್ನು ಗುರುತಿಸಲಾಗಿದ್ದು, 19 ಮೃತದೇಹಗಳನ್ನು ಇನ್ನಷ್ಟೇ ಗುರುತಿಸಬೇಕಿದೆ ಎಂದು ಹೇಳಿದ್ದಾರೆ.

ಧಾರ್ಮಿಕ ಸಭೆ ಆಯೋಜಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT