ಇದಕ್ಕೆ ಉತ್ತರಿಸಿದ ನಖ್ವಿ,‘ಹಜ್ ಯಾತ್ರೆಗೆ ಬೇಕಾಗಿರುವ ಎಲ್ಲಾ ಸಿದ್ಧತೆಗಳನ್ನು ಸರ್ಕಾರ ಮಾಡಿದೆ. ಆದರೆ, ಭಾರತದಿಂದ ಹಜ್ ಯಾತ್ರೆಗೆ ತೆರಳಲು ಎಷ್ಟು ಜನರಿಗೆ ಅವಕಾಶವಿದೆ ಎಂಬ ವಿಷಯ ಸೇರಿದಂತೆ ಇತರ ಅಂಶಗಳ ಬಗ್ಗೆ ಸೌದಿ ಅರೇಬಿಯಾ ನಿರ್ಧಾರ ಕೈಗೊಳ್ಳಬೇಕಾಗಿದೆ. ಮೋದಿ ಸರ್ಕಾರದ ಆಡಳಿತಾವಧಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಹಜ್ ಯಾತ್ರೆಗೆ ತೆರಳಿದ್ದಾರೆ’ ಎಂದರು.