ಹಾವೇರಿ: ‘ಕಾಂಗ್ರೆಸ್ ಪಕ್ಷವೂ ಸದಾ ಮಹಿಳೆಯರ ಪರವಿದೆ. ಅವರಿಗೆ ಯಾವುದೇ ಅನ್ಯಾಯ ಮಾಡಲು ಬಿಡುವುದಿಲ್ಲ. ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ತೀರ್ಮಾನಕ್ಕೆ ಕಾಂಗ್ರೆಸ್ ಸಮ್ಮತಿ ಇದೆ. ಆದರೆ, ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುವ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ನಮ್ಮ ವಿರೋಧವಿದೆ’ ಎಂದು ಕೆಪಿಸಿಸಿ ವಕ್ತಾರ ರಾದ ಸ್ವಾತಿ ಚಂದ್ರಶೇಖರ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರ ಮರು ವಿಂಗಡಣೆಯನ್ನು ನಾವು ಎಂದಿಗೂ ಒಪ್ಪುವುದಿಲ್ಲ. ದೇಶದ ಮಹಿಳೆಯರು ಸಹ ಇದನ್ನು ಒಪ್ಪುವುದಿಲ್ಲ’ ಎಂದರು.

‘ದೇಶದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಮಹಿಳಾ ಪರವಾದ ಯೋಜನೆಗಳನ್ನು ರೂಪಿಸಿದ್ದು ಕಾಂಗ್ರೆಸ್ ಸರ್ಕಾರ. ಈಗ ಮಹಿಳಾ ಮೀಸಲಾತಿಯನ್ನೂ ಕಾಂಗ್ರೆಸ್ ಬೆಂಬಲಿಸುತ್ತಿದೆ. ಆದರೆ, ಅದರ ಹೆಸರಿನಲ್ಲಿ ಕ್ಷೇತ್ರ ಮರು ವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಇದು ದೇಶದ ಜನರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯ’ ಎಂದು ಹೇಳಿದರು.

‘1989ರಲ್ಲಿ ರಾಜೀವ ಗಾಂಧಿ ಸರ್ಕಾರ, ಮಹಿಳಾ ಮೀಸಲಾತಿ ಜಾರಿಗೆ ತರಲು ಮುಂದಾದಾಗ ವಾಜಪೇಯಿ ವಿರೋಧಿಸಿದ್ದರು. ಅಂದಿನಿಂದ ಈವರೆಗೆ ಬಿಜೆಪಿ ಮನಸ್ಥಿತಿ ಬದಲಾಗಿಲ್ಲ. ಬಿಜೆಪಿಗೆ ಧೈರ್ಯ ಇದ್ದರೆ ಕೂಡಲೇ ಶೇ. 33ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲಿ’ ಎಂದು ಸ್ವಾತಿ ಸವಾಲು ಹಾಕಿದರು.

‘ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಸಂಸದ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವೇ ಮಹಿಳಾ ಮೀಸಲಾತಿಗೆ ಒಳಪಡಲಿ. ಆಗ, ಅವರೆಲ್ಲರೂ ತಮ್ಮ ಕ್ಷೇತ್ರವನ್ನು ಮಹಿಳೆಯರಿಗೆ ಬಿಟ್ಟು ಕೊಟ್ಟು, ಬೇರೆಡೆ ಸ್ಪರ್ಧಿಸಲಿ’ ಎಂದು ಆಗ್ರಹಿಸಿದರು.

‘ಪಂಚರಾಜ್ಯ ಚುನಾವಣೆ ನಡೆಯುವ ಸಂದರ್ಭದಲ್ಲಿಯೇ, ಜನರಲ್ಲಿ ಕಾಂಗ್ರೆಸ್ ಬಗ್ಗೆ ತಪ್ಪು ಭಾವನೆ ಮೂಡಿಸುವ ದುರುದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿ ಮಾಡಿದೆ. ತರಾತುರಿಯಲ್ಲಿ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಜತೆಗೆ ಮರು ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿತ್ತು. ದೇಶಕ್ಕೆ ಅನ್ಯಾಯವಾಗುವುದನ್ನು ತಪ್ಪಿಸಲು, ಮರು ವಿಂಗಡಣೆ ಮಸೂದೆಯನ್ನು ವಿರೋಧಿಸಲಾಗಿದೆ’ ಎಂದು ಹೇಳಿದರು.

‘ಕೇಂದ್ರ ಸರ್ಕಾರದ ಎಲ್ಲ ಸುದ್ದಿಗಳು ಸುಳ್ಳು ಎಂಬುದು ಜನರಿಗೆ ಅರ್ಥವಾಗಿದೆ. ಜನರ ದಾರಿ ತಪ್ಪಿಸುವ ವಿಷಯಗಳನ್ನೇ ಕೇಂದ್ರ ಸರ್ಕಾರ ವಾದಿಸುತ್ತಿದೆ. ಬಿಜೆಪಿ ಸುಳ್ಳು ಹೇಳುವ ಪಕ್ಷ ಹಾಗೂ ಜನರಿಗೆ ದಾರಿ ತಪ್ಪಿಸುವ ಪಕ್ಷವಾಗಿದೆ. ಮುಂಬರುವ ದಿನಗಳಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.

ಕೇವಲ 24 ಲಕ್ಷ ಉದ್ಯೋಗ ಸೃಷ್ಟಿ: ‘ಬಿಜೆಪಿಯು ಚುನಾವಣೆಯ ಪ್ರಣಾಳಿಕೆಯಲ್ಲಿ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಘೋಷಿಸಿತ್ತು. ಹತ್ತು ವರ್ಷದಲ್ಲಿ ಈವರೆಗೆ 24 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಆದರೆ, ಕೇವಲ 24 ಲಕ್ಷ ಉದ್ಯೋಗ ಸೃಷ್ಟಿಸಿದ್ದಕ್ಕೆ ದಾಖಲೆಗಳು ಲಭ್ಯವಿವೆ. ಇದೇ ಕಾರಣಕ್ಕೆ ಬಿಜೆಪಿ 2024ರಲ್ಲಿ ಬಹುಮತ ಕಳೆದುಕೊಂಡು, ಎನ್ಡಿಎ ಸಹಾಯದೊಂದಿಗೆ ಸರ್ಕಾರ ನಡೆಸುತ್ತಿದೆ’ ಎಂದು ಸ್ವಾತಿ ಚಂದ್ರಶೇಖರ ದೂರಿದರು.

ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ಪಾಟೀಲ, ಮುಖಂಡರಾದ ಶಾಂತಾ ಶಿರೂರ, ಗೀತಾ ಪ್ರಕಾಶ ಪತ್ರಿಕಾಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-22-1506844702

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.