ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11ನೇ ಶತಮಾನದ ಕಟ್ಟಡದ ವೈಜ್ಞಾನಿಕ ಸಮೀಕ್ಷೆ ನಡೆಸಲು ASIಗೆ ಹೈಕೋರ್ಟ್‌ ಆದೇಶ

Published 11 ಮಾರ್ಚ್ 2024, 12:09 IST
Last Updated 11 ಮಾರ್ಚ್ 2024, 12:09 IST
ಅಕ್ಷರ ಗಾತ್ರ

ಇಂದೋರ್‌: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ಮಧ್ಯಕಾಲೀನ ಯುಗದ ಭೋಜಶಾಲಾ ಕಟ್ಟಡದ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಮಧ್ಯಪ್ರದೇಶ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.

‘ಹಿಂದಿ ಫ್ರಂಟ್ ಫಾರ್ ಜಸ್ಟಿಸ್’ ಎಂಬ ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್‌. ಎ ಧರ್ಮಾಧಿಕಾರಿ ಮತ್ತು ದೇವನಾರಾಯಣ ಮಿಶ್ರಾ ಅವರಿದ್ದ ವಿಭಾಗಿಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಜತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.

11 ನೇ ಶತಮಾನದ ಸ್ಮಾರಕ ಎಂದು ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಂರಕ್ಷಿಸಿರುವ ಈ ಕಟ್ಟಡವನ್ನು ಹಿಂದೂಗಳು ವಾಗ್ದೇವಿ (ಸರಸ್ವತಿ) ದೇವಾಲಯವೆಂದು ಪೂಜಿಸಿದರೆ, ಮುಸ್ಲಿಮರು ಕಮಲ್ ಮೌಲಾ ಮಸೀದಿ ಎನ್ನುತ್ತಾರೆ.

2003ರಲ್ಲಿ ಪುರಾತತ್ವ ಸರ್ವೇಕ್ಷಣಾ ಇಲಾಖೆ ರೂಪಿಸಿದ್ದ ವ್ಯವಸ್ಥೆಯ ಪ್ರಕಾರ, ಈ ಭೋಜಶಾಲಾ ಕಟ್ಟಡದಲ್ಲಿ ಪ್ರತಿ ಮಂಗಳವಾರ ಹಿಂದೂಗಳು ವಾಗ್ದೇವಿ ಪೂಜೆ ಮಾಡುತ್ತಾರೆ ಹಾಗೂ ಮುಸ್ಲಿಮರು ಪ್ರತಿ ಶುಕ್ರವಾರ ನಮಾಜ್‌ ಮಾಡುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT