ಮುಂಬೈ: ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅದರ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅದಾನಿ ಅವರನ್ನು ಮಾರುಕಟ್ಟೆ ನಿಯಮ ಉಲ್ಲಂಘನೆಯ ಆರೋಪದಿಂದ ಮುಕ್ತಗೊಳಿಸಿ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ವಂಚನೆ ಅಥವಾ ಕ್ರಿಮಿನಲ್ ಪಿತೂರಿ ಆರೋಪಗಳು ಸಾಬೀತಾಗಿಲ್ಲ ಎಂದು ಕೋರ್ಟ್ ಹೇಳಿದೆ. ಗಂಭೀರ ವಂಚನೆಗಳ ತನಿಖಾ ಕಚೇರಿಯು (ಎಸ್ಎಫ್ಐಒ) ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ (ಎಇಎಲ್) ಮತ್ತು ಅದರ ಪ್ರವರ್ತಕರಾದ ಗೌತಮ್ ಅದಾನಿ, ರಾಜೇಶ್ ಅದಾನಿ ಅವರ ವಿರುದ್ಧ 2012ರಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು.

ಇವರಿಬ್ಬರು ಕ್ರಿಮಿನಲ್ ಪಿತೂರಿಯಲ್ಲಿ, ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿ ಸಲ್ಲಿಸಿತ್ತು. ₹388 ಕೋಟಿ ಮೌಲ್ಯದ ಪ್ರಕರಣ ಇದು. ತಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸದ ಸೆಷನ್ಸ್ ನ್ಯಾಯಾಲಯದ ನಿಲುವನ್ನು ಪ್ರಶ್ನಿಸಿ ಗೌತಮ್ ಅದಾನಿ, ರಾಜೇಶ್ ಅದಾನಿ ಮತ್ತು ಕಂಪನಿಯು ಹೈಕೋರ್ಟ್ಗೆ 2019ರಲ್ಲಿ ಅರ್ಜಿ ಸಲ್ಲಿಸಿದ್ದರು.

ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ನ ಏಕಸದಸ್ಯ ಪೀಠವು ಸೋಮವಾರ ರದ್ದುಪಡಿಸಿದೆ. ಗೌತಮ್ ಅದಾನಿ, ರಾಜೇಶ್ ಅದಾನಿ ಮತ್ತು ಎಇಎಲ್ ಕಂಪನಿಯನ್ನು ದೋಷಮುಕ್ತಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.