ನವದೆಹಲಿ: ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಸೂಚಿಸಿದೆ.

ಚಂದ್ರಶೇಖರ್ ಅವರ ಅರ್ಜಿಯನ್ನು ವಜಾಗೊಳಿಸಿದ್ದ ಮ್ಯಾಜಿಸ್ಟೀರಿಯಲ್ ಕೋರ್ಟ್ ಆದೇಶದ ವಿರುದ್ಧ ಸಲ್ಲಿಸಿದ್ದ ಪರಿಷ್ಕೃತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವೀಂದರ್ ಡುಡೇಜಾ ಅವರು, ‘ಪ್ರಕರಣದಲ್ಲಿ ಪ್ರತಿವಾದಿಯ ಪ್ರತಿಕ್ರಿಯೆ ಅಗತ್ಯವಿದೆ’ ಎಂದು ತರೂರ್ ಅವರಿಗೆ ನೋಟಿಸ್ ಜಾರಿ ಮಾಡಿದರು.

‘ರಾಷ್ಟ್ರೀಯ ಟೆಲಿವಿಷನ್ನಲ್ಲಿ ತರೂರ್ ಅವರು ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ‘2024ರ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ನಾಯಕ ಮತ್ತು ತಿರುವನಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತದಾರರಿಗೆ ಲಂಚ ನೀಡಿದ್ದರು’ ಎಂದು ಆರೋಪಿಸಿದ್ದಾರೆ’ ಎಂದು ರಾಜೀವ್ ಚಂದ್ರಶೇಖರ್ ಕೋರ್ಟ್ ಮೆಟ್ಟಿಲೇರಿದ್ದಾರೆ.

ಚಂದ್ರಶೇಖರ್ ಅವರ ಪ್ರಕಾರ, ತರೂರ್ ತನ್ನ ಖ್ಯಾತಿಯನ್ನು ಕುಗ್ಗಿಸುವ ಮತ್ತು ಕಳೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಉದ್ದೇಶದಿಂದ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಚಂದ್ರಶೇಖರ್ ವಾದಿಸಿದ್ದಾರೆ.

ಶಶಿ ತರೂರ್ ಯಾವುದೇ ಮಾನನಷ್ಟ ಮಾಡಿಲ್ಲ ಎಂದು ತೀರ್ಪಿತ್ತಿರುವ ಕೆಳ ನ್ಯಾಯಾಲಯವು ಸಾಕ್ಷ್ಯಗಳನ್ನು ನಿರ್ಲಕ್ಷಿಸಿದೆ ಎಂದು ಚಂದ್ರಶೇಖರ್ ಪರ ಹಾಜರಿದ್ದ ಹಿರಿಯ ವಕೀಲರು ವಾದಿಸಿದ್ದಾರೆ.

ಕೆಳ ನ್ಯಾಯಾಲಯವು ಯಾವುದೇ ಮಾನನಷ್ಟ ಮೊಕದ್ದಮೆಯನ್ನು ಮಾಡಲಾಗಿಲ್ಲ ಎಂದು ತೀರ್ಪು ನೀಡಲು ಸಾಕ್ಷ್ಯಗಳನ್ನು ನಿರ್ಲಕ್ಷಿಸಿದೆ ಎಂದು ಹೇಳಿದರು.

ಮುಂದಿನ ವಿಚಾರಣೆ ಸೆಪ್ಟೆಂಬರ್ 19ಕ್ಕೆ ನಿಗದಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.